ಮಡಿಕೇರಿ ಆ.11 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಗೌರವ ಕೋಶಾಧಿಕಾರಿಯಾಗಿ ಎಸ್.ಎಸ್. ಸಂಪತ್ ಕುಮಾರ್ ಆಯ್ಕೆಯಾಗಿದ್ದಾರೆ.
ಹಿಂದಿನ ಕೋಶಾಧಿಕಾರಿ ಎಂ.ಬಿ.ಜೋಯಪ್ಪ ಅವರ ತೆರವಾದ ಸ್ಥಾನಕ್ಕೆ ಸಂಪತ್ ಕುಮಾರ್ ಅವರನ್ನು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ನಿಯುಕ್ತಿಗೊಳಿಸಿದ್ದಾರೆ ಎಂದು ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









