ಮಡಿಕೇರಿ ಆ.11 : ಎಸ್‍ವೈಎಸ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ “ಜಾತ್ಯಾತೀತತೆ ಭಾರತದ ಧರ್ಮ” ಎಂಬ ಘೋಷಣೆಯೊಂದಿಗೆ ಆ.15 ರಂದು ನೆಲ್ಯಹುದಿಕೇರಿಯಲ್ಲಿ “ರಾಷ್ಟ್ರ ರಕ್ಷಾ ಸಂಗಮ” ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ಕಾರ್ಯದರ್ಶಿ ಸಿ.ಎಂ.ಹಮೀದ್ ಮೌಲವಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 4 ಗಂಟೆಗೆ ನೆಲ್ಯಹುದಿಕೇರಿಯ ಶಾದಿ ಮಹಲ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಹಾಯಕ ಖಾಝಿಗಳಾದ ಎಂ.ಎಂ.ಅಬ್ದುಲ್ಲ ಫೈಝಿ ಉದ್ಘಾಟಿಸಲಿದ್ದು, ಸಂಘಟನೆಯ ಜಿಲ್ಲಾಧ್ಯಕ್ಷ ಬಶೀರ್ ಹಾಜಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಕೊಡ್ಲಿಪೇಟೆಯ ಕಿರಿಕೊಡ್ಲಿಮಠದ ಶ್ರೀ ಸದಾಶಿವ ಸ್ವಾಮೀಜಿ, ಚೆಟ್ಟಳ್ಳಿಯ ಕ್ರೈಸ್ತ ಧರ್ಮ ಗುರುಗಳಾದ ಫಾದರ್ ಜೆರಾಲ್ಡ್ ಸ್ಕ್ವೇರಿಯ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ, ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ ಮಾಸ್ಟರ್ ಪಾಲ್ಗೊಳ್ಳಲಿದ್ದಾರೆ.
ಮುಖ್ಯ ಭಾಷಣಕಾರರಾಗಿ ಸಕಲೇಶಪುರದ ಆನೆಮಹಲ್ ಇಬ್ರಾಹಿಂ ಮುಸ್ಲಿಯಾರ್ ಭಾಗವಹಿಸಲಿದ್ದು, ಜಿಲ್ಲೆಯ ಸರ್ವ ಜನಾಂಗದ ಬಂಧುಗಳು ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಇಬ್ಬರು ಶಾಸಕರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.
ಶ್ರೇಷ್ಠವಾದ ಸಂವಿಧಾನವನ್ನು ಹೊಂದಿರುವ ಭಾರತವು 77ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದು, ಎಲ್ಲಾ ಧರ್ಮಗಳನ್ನು ಸ್ವೀಕರಿಸುವ ಮತ್ತು ಗೌರವಿಸುವ ದೇಶ ಇದಾಗಿದೆ. ಇಲ್ಲಿ ಹಲವಾರು ಧರ್ಮಗಳು, ಜಾತಿಗಳು, ಭಾಷೆ, ಪದ್ಧತಿ, ಸಂಸ್ಕೃತಿ ಇದ್ದು, ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ಶ್ರೇಷ್ಠ ರಾಷ್ಟ್ರವಾಗಿದೆ. ಆದರೆ ಪ್ರಸ್ತುತ ದಿನಗಳಲ್ಲಿ ಕೆಲವೆಡೆ ಜಾತಿ, ಧರ್ಮದ ಹೆಸರಿನಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವುದು ಬೇಸರದ ವಿಚಾರವಾಗಿದೆ.
ಜಾತ್ಯತೀತತೆಯನ್ನು ಉಳಿಸುವ ಮೂಲಕವೇ ಸುಂದರ ಭಾರತದ ನಿರ್ಮಾಣ ಸಾಧ್ಯ. ಈ ಕುರಿತು ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಎಸ್‍ವೈಎಸ್ ಕೊಡಗು ಜಿಲ್ಲಾ ಸಮಿತಿಯು “ರಾಷ್ಟ್ರ ರಕ್ಷಾ ಸಂಗಮ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಉತ್ತಮ ಬಾಂಧವ್ಯವನ್ನು ಮತ್ತು ಸಹಬಾಳ್ವೆಯನ್ನು ಮೂಡಿಸುವ ಕೆಲಸವನ್ನು ಕಾರ್ಯಕ್ರಮದ ಮೂಲಕ ಮಾಡಲಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಸಿಪಿಎಂ ಬಶೀರ್ ಹಾಜಿ, ಕಾರ್ಯದರ್ಶಿ ಇಕ್ಬಾಲ್ ಮೌಲವಿ, ಉಪಾಧ್ಯಕ್ಷ ಮುಹಮ್ಮದ್ ಆಲಿ, ಸದಸ್ಯರಾದ ಹಾರೂನ್ ಹಾಜಿ ಹಾಗೂ ಅಬ್ದುಲ್ ಸಲಾಂ ಹಾಜಿ ಉಪಸ್ಥಿತರಿದ್ದರು.
Breaking News
- *ಎಂ.ಎಂ.ಸುಪ್ರಿತಾಗೆ ಚಿನ್ನದ ಪದಕ*
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*
- *ಕಳೆದು ಹೋಗಿದೆ*
- *ಫೆ.27 ಮತ್ತು 28 ರಂದು ಕೊಡವ ಬಲ್ಯನಮ್ಮೆ : ವಿವಿಧ ಸ್ಪರ್ಧೆಗಳಿಗೆ ಆಹ್ವಾನ*
- *ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*