ನಾಪೋಕ್ಲು ಆ.11 : ನರಿಯಂದದ ಗ್ರಾ.ಪಂ ಯ ಎರಡನೇ ಅವಧಿಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪೆಮ್ಮಂಡ ಕಾವೇರಮ್ಮ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಕೋಡಿರ ಎಂ. ನಾಣಯ್ಯ ಆಯ್ಕೆಯಾದರು.
ಗ್ರಾ.ಪಂ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಎರಡನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಪೆಮ್ಮಂಡ ಕಾವೇರಮ್ಮ ಮಾತನಾಡಿ, ಈ ಹಿಂದೆ ಕೊಕೇರಿ ಗ್ರಾಮ ಪಂಚಾಯಿತಿ ಜವಾಬ್ದಾರಿ ಮಾತ್ರ ಇತ್ತು ಈಗ ಕೋಕೇರಿ ಸೇರಿದಂತೆ ಏಳು ಗ್ರಾಮಗಳ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಸದಸ್ಯರ ಬೆಂಬಲದೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು.
ನೋಡಲ್ ಅಧಿಕಾರಿಯಾಗಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್ ಕಾರ್ಯ ನಿರ್ವಹಿಸಿದರು.
ಈ ಸಂದರ್ಭ ಗ್ರಾ.ಪಂ ಮಾಜಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ, ಓಬಿಸಿ ತಾಲೂಕು ಅಧ್ಯಕ್ಷ ಕೋಳೆಯ0ಡ ಗಿರೀಶ್ ಜಿ.ಪಂ ಮಾಜಿ ಸದಸ್ಯರಾದ ನೆಲ್ಲಚಂಡ ಕಿರಣ್ ಕಾರ್ಯಪ್ಪ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ನೆರೆಯಡಮ್ಮಂಡ ಉಮಾ ಪ್ರಭು, ಶಕ್ತಿ ಕೇಂದ್ರದ ಅಧ್ಯಕ್ಷರಾದ ಉಪಾಧ್ಯಕ್ಷರಾದ ಪ್ಕೋಳoಡ್ರ ಧನುಜ್, ಚೇನಂಡ ಸಂಪತ್, ಜಿಲ್ಲಾ ಸಮಿತಿ ಸದಸ್ಯರಾದ ಐತಿಚಂಡ ಭೀಮಯ್ಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಪವನ್ ತೋಟಂಬೈಲು ಗ್ರಾಮ ಪಂಚಾಯಿತು ಸದಸ್ಯರು ಉಪಸ್ಥಿತರಿದ್ದರು.
ವರದಿ : ದುಗ್ಗಳ ಸದಾನಂದ