ಮಡಿಕೇರಿ,ಆ.11 : ಸಹಕಾರ ಸಂಘಗಳು ವಿವಿಧೊದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘವಾಗಿ ಮಾರ್ಪಾಡಾಗಿರುವದರಿಂದ ಸಂಘದ ಸದಸ್ಯರುಗಳಿಗೆ ವಿವಿಧ ಯೋಜನೆಗಳಡಿ ಸೌಲಭ್ಯಗಳನ್ನು ಹೊಂದಿಕೊಳ್ಳಲು ಅವಕಾಶವಿರುವದಾಗಿ ಕೊಕ್ಕಲೇರ ಸುಜು ತಿಮ್ಮಯ್ಯ ಹೇಳಿದರು.
ಮಕ್ಕಂದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2022-23ನೇ ಸಾಲಿನ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದುವರೆಗೆ ಕೃಷಿ ಪ್ರಾಥಮಿಕ ಸಹಕಾರ ಸಂಘವಾಗಿದ್ದ ಎಲ್ಲ ಸಹಕಾರ ಸಂಘಗಳನ್ನು ವಿವಿಧೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರವೆಂದು ಮಾರ್ಪಡಿಸಿ ಏಕರೂಪದ ಬೈಲಾ ಜಾರಿಗೆ ತರಲಾಗಿದೆ. ಇದುವರೆಗೆ ಕೃಷಿಗೆ ಸಂಬಂಧಿಸಿದಂತೆ ಮಾತ್ರ ಸೌಲಭ್ಯಗಳನ್ನು ಹೊಂದಿಕೊಳ್ಳಬಹುದಾಗಿತ್ತು. ಇದೀಗ ನೂತನ ಮಾರ್ಪಾಡಿನಿಂದಾಗಿ ಬೇರೆ, ಬೇರೆ ವಿವಿಧ ರೀತಿಯ ಸೌಲಭ್ಯಗಳನ್ನು ಹೊಂದಿಕೊಳ್ಳಬಹುದು ಎಂದು ತಿಳಿಸಿದರು. ಸಂಘವು 2022-23ನೇ ಸಾಲಿನಲ್ಲಿ ಸದಸ್ಯರ ಪಾಲು ಹಣ, ವಿವಿಧ ಸಾಲ ನೀಡಿಕೆ, ವಿವಿಧ ನಿಧಿಗಳ ಸಹಿತ ಒಟ್ಟು ರೂ.18,63,404ರಷ್ಟು ಲಾಭ ಗಳಿಸಿದೆ. ಲಾಭಾಂಶದಲ್ಲಿ ಸದಸ್ಯರುಗಳಿಗೆ ಶೇ.10 ರಷ್ಟು ಡಿವಿಡೆಂಡ್ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಸಂಘದ ಪರವಾಗಿ ಮಕ್ಕಂದೂರು ಹಾಗೂ ಮುಕ್ಕೋಡ್ಲು ಭಾಗದಲ್ಲಿ ಪಿಗ್ಮಿ ಹಣ ಸಂಗ್ರಹ ಮಾಡಲು ಅವಕಾಶವಿದ್ದು, ಆಸಕ್ತರು ಸಂಘವನ್ನು ಸಂಪರ್ಕಿಸುವಂತೆ ಕೋರಿದರು.
ಕರ್ನಾಟಕ ಜೀವ ವೈವಿಧ್ಯ ಮಂಡಳಿ ಮಾಜಿ ಅಧ್ಯಕ್ಷ ನಾಪಂಡ ರವಿಕುಶಾಲಪ್ಪ ಹಲವು ಸಲಹೆ ಸೂಚನೆಗಳನ್ನು ನೀಡಿದರು. ಸದಸ್ಯರುಗಳು ಚರ್ಚೆಯಲ್ಲಿ ಪಾಲ್ಗೊಂಡು ಸಂದೇಹಗಳನ್ನು ಪರಿಹರಿಸಿಕೊಂಡರು.
ಸಂಘದ ಉಪಾಧ್ಯಕ್ಷ ಕುಂಬಗೌಡನ ಪ್ರಸನ್ನ, ನಿರ್ದೇಶಕರುಗಳಾದ ಕನ್ನಿಕಂಡ ಸುಬ್ಬಯ್ಯ, ಲಕ್ಕಪ್ಪನ ವಿಜೇತ, ಕೊಟ್ಟಕೇರಿಯನ ಪ್ರದೀಪ್, ಮಂಜುನಾಥ ನಾಯಕ, ಹೆಚ್.ಎಂ.ಸುಧಾಕರ, ಉಕ್ಕೇರಂಡ ನೀಲಮ್ಮ,ಪಿ.ಎಂ.ಸುಲೋಚನ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಧಿ ಎಸ್.ಸಿ. ರಾಗಿಣಿ, ಗೌರವ ಕಾರ್ಯದರ್ಶಿ ಸಿ.ಬಿ. ಕುಟ್ಟಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಪ್ರಬಾರ) ಎಂ.ಎಸ್.ಶೋಭಾವತಿ, ಗುಮಾಸ್ಥ ಎಂ.ಎಸ್.ವಿಜಯ್‌ಕುಮಾರ್, ಹಟ್ಟಿಹೊಳೆ ಶಾಖಾ ವ್ಯವಸ್ಥಾಪಕ ಸಂತೋಷ್, ಸಿಬ್ಬಂದಿಗಳಾದ ಕೆ.ಆರ್.ಹೇಮಲತ, ಎ.ಡಿ.ಪೊನ್ನಪ್ಪ ಇದ್ದರು. ಉಪಾಧ್ಯಕ್ಷ ಅಣ್ಣೆಚ್ಚಿರ ಸತೀಶ್ ಸ್ವಾಗತಿಸಿದರೆ, ನಿರ್ದೇಶಕಿ ಪಡೇಟಿರ ಕವಿತಾ ಪ್ರಾರ್ಥಿಸಿದರು. ಬಿ.ಎನ್.ರಮೇಶ್ ವಂದಿಸಿದರು.
Breaking News
- *ಕೊಡಗು ಪತ್ರಿಕಾ ಭವನ ಟ್ರಸ್ಟ್ ನಿಂದ ಗಣರಾಜ್ಯೋತ್ಸವ ಆಚರಣೆ*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರನ್ನು ಗೌರವಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಗಣತಂತ್ರ ಹಬ್ಬದ ಮೂಲಕ ನಮ್ಮ ದೇಶದ ಸಾಂವಿಧಾನಿಕ ಅನನ್ಯತೆಯನ್ನು ಸಾರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನದ ಆಶಯಗಳಿಗೆ ಬದ್ಧರಾಗಿರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾವೆಲ್ಲರೂ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ, ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*