ಸುಂಟಿಕೊಪ್ಪ ಆ.11: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಂಟಿಕೊಪ್ಪ ಒಕ್ಕೂಟದ ವತಿಯಿಂದ ಚೌಡೇಶ್ವರಿ ದೇವಾಲಯದ ಆವರಣ ಸೇರಿದಂತೆ ಸುತ್ತ ಮುತ್ತಲಿನಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.
ಸುಂಟಿಕೊಪ್ಪ ಒಕ್ಕೂಟದ ಅಧ್ಯಕ್ಷೆ ರಮಣಿ ಸ್ವಚ್ಚಾತ ಕಾರ್ಯಕ್ಕೆ ಚಾಲನೆ ನೀಡಿದರು.
ಒಕ್ಕೂಟದ ಪದಾಧಿಕಾರಿಗಳು ಹಾಗೂ ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರು ಆವರಣದಲ್ಲಿ ಬೆಳೆದಿದ ಕಾಡು ಗಿಡ ಗಂಟಿಗಳನ್ನು ಕಡಿದು ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯವನ್ನು ನೇರವೇರಿಸಿದರು.
ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಪದಾಧಿಕಾರಿಗಳು, ಸೇವಾ ಪ್ರತಿನಿಧಿ ಚಿತ್ರಾ ಸುರೇಶ್ ಹಾಗೂ ಮತ್ತಿರರು ಇದ್ದರು.








