ಮಡಿಕೇರಿ ಆ.11 : ಮಡಿಕೇರಿ 66/11 ಕೆವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೋಗುವ ಎಫ್5 ಜಿ.ಟಿ.ರಸ್ತೆ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಆಗಸ್ಟ್, 12 ರಂದು ಬೆಳಗ್ಗೆ 9.30 ರಿಂದ ಸಂಜೆ 3 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಪುಟಾಣಿನಗರ, ದೇಚೂರು, ಚೈನ್‍ಗೇಟ್, ಎಚ್‍ಆರ್‍ಬಿ ಕಾಲೋನಿ, ಅರಣ್ಯಭವನ, ಜಯನಗರ, ಮಂಗಳಾದೇವಿನಗರ, ಅಶೋಕಪುರ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ . ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಇಇ ಅನಿತಾ ಬಾಯಿ ಕೋರಿದ್ದಾರೆ.









