ಮಡಿಕೇರಿ ಆ.11 : ಜಿಲ್ಲಾ ಅಗ್ರಣೀ ಬ್ಯಾಂಕ್ 2023-24 ನೇ ಸಾಲಿನ ಕೊಡಗು ಜಿಲ್ಲಾ ವಾರ್ಷಿಕ ಸಾಲ ಯೋಜನೆಯನ್ನು ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ವಿಶೇಷ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಬಿಡುಗಡೆಗೊಳಿಸಿದರು.
ಕಾರ್ಯಕ್ರಮದ ನಂತರ ಬ್ಯಾಂಕರುಗಳನ್ನು ಉದ್ದೇಶಿಸಿ ಮಾತನಾಡಿದ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಜನಸಾಮಾನ್ಯರಿಗೆ ಅಗತ್ಯವಿರುವ ಸಾಲ ವಿತರಿಸುವುದರ ಮೂಲಕ ಜಿಲ್ಲಾ ವಾರ್ಷಿಕ ಸಾಲ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವಂತೆ ಸಲಹೆ ನೀಡಿದರು. ಈ ಬಾರಿಯ ವಾರ್ಷಿಕ ಸಾಲ ಯೋಜನೆಯು ಜಿಲ್ಲೆಯ ಕೃಷಿಕರಿಗೆ ವರದಾನವಾಗಲಿದೆ ಎಂದು ಸಭೆಗೆ ತಿಳಿಸಿದರು.
ಜಿಲ್ಲಾ ಲೀಡ್ ಬ್ಯಾಂಕ್ ಮುಖ್ಯಸ್ಥರಾದ ಗಂಗಾಧರ್ ನಾಯ್ಕ್ ಅವರು ಮಾತನಾಡಿ 2023-24 ನೇ ಸಾಲಿಗೆ ಜಿಲ್ಲಾ ವಾರ್ಷಿಕ ಸಾಲ ಯೋಜನೆಯನ್ವಯ ರೂ.4504 ಕೋಟಿ ಗುರಿ ನಿಗದಿಪಡಿಸಿದ್ದು, ಅದರಲ್ಲಿ 71.56 ಪ್ರತಿಶತ(ರೂ. 3223.95 ಕೋಟಿ) ಆದ್ಯತಾ ವಲಯಕ್ಕೆ ಮೀಸಲಿಟ್ಟಿದ್ದು ಅವುಗಳಲ್ಲಿ ಕೃಷಿ ಚಟುವಟಿಕೆಗಳಿಗೆ ರೂ.2400.56 ಕೋಟಿ, ಕಿರು ಮತ್ತು ಮಧ್ಯಮ ಗಾತ್ರದ ಉದ್ಯಮ ಕ್ಷೇತ್ರಕ್ಕೆ ರೂ.689.83 ಕೋಟಿ ಮತ್ತು ಇತರೆ ಆದ್ಯತಾ ವಲಯಕ್ಕೆ ರೂ.133.56 ಕೋಟಿ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯ ಎಲ್ಲಾ ಬ್ಯಾಂಕುಗಳು ಜನರಿಗೆ ಸಾಲ ವಿತರಿಸುವುದರ ಮೂಲಕ ನಿಗದಿಪಡಿಸಿರುವ ಗುರಿಯನ್ನು ಸಾಧಿಸಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಪ್ರತಿವರ್ಷದಂತೆ ಈ ವರ್ಷವೂ ಲೀಡ್ ಬ್ಯಾಂಕ್ ವತಿಯಿಂದ ಜಿಲ್ಲಾ ವಾರ್ಷಿಕ ಸಾಲ ಯೋಜನೆ ಬಿಡುಗಡೆ ಮಾಡಲಾಗಿದ್ದು, ಈ ಕ್ರಿಯಾಯೋಜನೆಯು ನಬಾರ್ಡ್ ಸಂಸ್ಥೆಯು ಇತ್ತೀಚೆಗೆ ಬಿಡುಗಡೆ ಮಾಡಿದ ಸಾಮಥ್ರ್ಯ ಆಧಾರಿತ ಸಾಲ ಯೋಜನೆಯ ನೆರವನ್ನು ಪಡೆದು ಬ್ಯಾಂಕುಗಳ ವಲಯವಾರು ಹಂಚಿಕೆವಾರು ಜೊತೆಗೆ, ಹಿಂದಿನ ವರ್ಷದ ಆಯಾಯ ಬ್ಯಾಂಕುಗಳ ಸಾಧನೆಯನ್ನು ಮಾನದಂಡವಾಗಿಟ್ಟುಕೊಂಡು ವಾರ್ಷಿಕ ಸಾಲ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದರಲ್ಲದೆ ಕೊಡಗು ಕೃಷಿ ಪ್ರಧಾನ ಜಿಲ್ಲೆಯಾಗಿರುವುದರಿಂದ ಕೃಷಿ ಮತ್ತು ಆದ್ಯತಾ ವಲಯಕ್ಕೆ ಒತ್ತು ನೀಡುವ ಉದ್ದೇಶದಿಂದ ಗುರಿಯನ್ನು ನಿಗದಿಪಡಿಸಲಾಗಿದೆ ಎಂಬುದು ಘೋಷ ವಾಕ್ಯವಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕಾರಿ ತನು ನಂಜಪ್ಪ, ನಬಾರ್ಡ್ನ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕರಾದ ರಮೇಶ್ ಬಾಬು, ವಿವಿಧ ಬ್ಯಾಂಕುಗಳ ಕ್ಷೇತ್ರೀಯ ಕಾರ್ಯಾಲಯದ ಪ್ರತಿನಿಧಿಗಳು, ಬ್ಯಾಂಕುಗಳ ಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
Breaking News
- *ಭಾಗಮಂಡಲ ಫ್ಲೈ ಓವರ್ – ಫ್ಲಾಶ್ ಬ್ಯಾಕ್*
- *ಅರ್ಚಕರ ಮೇಲೆ ನಡೆದ ಹಲ್ಲೆ ಪ್ರಕರಣ : ಸಹಕರಿಸಿದ ಆರೋಪಿಗಳು ಹಾಗೂ ವಾಹನಗಳು ವಶ : ಆರೋಪಿಗಳಿಗೆ ಸಹಾಯ ಮಾಡುತ್ತಿರುವವರ ಕುರಿತು ಮಾಹಿತಿ ಒದಗಿಸಲು ಎಸ್ಪಿ ಮನವಿ*
- *ಮುಖ್ಯಮಂತ್ರಿಗಳಿಗೆ ಕೊಡಗು ಎಸ್ಡಿಪಿಐಯಿಂದ ಪಂಚ ಪ್ರಶ್ನೆ*
- *ಜೀವ ಬೆದರಿಕೆ ಇದೆ ಎಂದು ಆರೋಪಿಸಿ ದೂರು ನೀಡಿದ ಎನ್.ಯು.ನಾಚಪ್ಪ*
- *ಮಡಿಕೇರಿಯಲ್ಲಿ ಹುತಾತ್ಮ ದಿನಾಚರಣೆ : ಗಾಂಧೀಜಿ ತತ್ವ, ಆದರ್ಶ ಮೈಗೂಡಿಸಿಕೊಳ್ಳಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ*
- *ಕೊಡಗು : ಫೆ.13 ರವರೆಗೆ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ”*
- *ಒಳಮೀಸಲಾತಿ ಶೀಘ್ರ ಜಾರಿಗೆ ತರಲು ದಲಿತ ಸಂಘರ್ಷ ಸಮಿತಿ ಆಗ್ರಹ*
- *ಮೂರ್ನಾಡು ಗಜಾನನ ಯುವಕ ಸಂಘ ಖಂಡನೆ*
- *ಅಮಾಯಕರ ಮೇಲಿನ ಹಲ್ಲೆ ಖಂಡನೀಯ : ಮೂರ್ನಾಡು ಆಪ್ತಮಿತ್ರ ಬಳಗ ಅಸಮಾಧಾನ*
- *ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದಿಂದ ಸಂಭ್ರಮದ ಪುತ್ತರಿ ಒತ್ತೋರ್ಮೆ ಕೂಟ*