ಮಡಿಕೇರಿ ಆ.11 : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಆ.14 ಮತ್ತು 15 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಆ.14 ರಂದು ಬೆಳಗ್ಗೆ 11 ಗಂಟೆಗೆ ಸೋಮವಾರಪೇಟೆ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಬಳಿಕ ಮಧ್ಯಾಹ್ನ 3 ಗಂಟೆಗೆ ವಿರಾಜಪೇಟೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಆ.15 ರಂದು ಬೆಳಗ್ಗೆ 9 ಗಂಟೆಗೆ ನಗರದ ಕೋಟೆ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಮಧ್ಯಾಹ್ನ 12.30 ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ ಸರ್ಕಾರದ ಇಂಧನ ಇಲಾಖೆಯ ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ತಿಳಿಸಿದ್ದಾರೆ.