ಬೆಂಗಳೂರು ಆ.12 : ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದರು.
ಗಾಯಾಳುಗಳು ದಾಖಲಾಗಿದ್ದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಇದೇ ವೇಳೆ ಘಟನೆ ಬಗ್ಗೆ ಪ್ರತ್ಯೇಕ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಮತ್ತು ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.