ಮಡಿಕೇರಿ ಆ.12 : ನೆಲಜಿಯ ಅಂಬಲ ಮಹಿಳಾ ಸಮಾಜದ ವತಿಯಿಂದ ಸಾಧಕರನ್ನು ಸನ್ಮಾನಿಸಲಾಯಿತು.
ಅಂಬಾಲ ಮಹಿಳಾ ಸಮಾಜದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ವಿಧಾನಪರಿಷತ್ ಸದಸ್ಯ ಎಂ.ಪಿ.ಸುಜಾಕುಶಾಲಪ್ಪ , ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಆಕಾಶವಾಣಿಯ ನಿವೃತ್ತ ಉದ್ಘೋಷಕಿ ಶಾರದ ನಂಜಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಸಮಾಜದ ಪ್ರಮುಖರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.