ಬೆಂಗಳೂರು ಆ.12 : ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿ ಭಾಗೀರಥಿ ಮುರುಳ್ಯ ಆಯ್ಕೆಯಾಗಿದ್ದಾರೆ.
ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರ ಆದೇಶದನ್ವಯ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಸಮಿತಿಯ ಅಧ್ಯಕ್ಷರಾಗಿ ರೂಪಕಲಾ ಎಂ. ಅವರು ಕಾರ್ಯ ನಿರ್ವಹಿಸಲಿದ್ದಾರೆ.
ಸಮಿತಿಗೆ 15 ವಿಧಾನಸಭಾ ಸದಸ್ಯರು ಹಾಗೂ 5 ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.