ಸುಂಟಿಕೊಪ್ಪ, ಆ.12: ಗದ್ದೆಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ನೂತನವಾಗಿ ಆಯ್ಕೆಯಾದ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸುಂಟಿಕೊಪ್ಪ ಗ್ರೇಡ್ 1 ಗ್ರಾ.ಪಂ 2ನೇ ಅವಧಿಯ ಚುನಾವಣೆಯಲ್ಲಿ ಅಧ್ಯಕ್ಷರಾಗಿ ನೇಮಕಗೊಂಡ ಪಿ.ಆರ್.ಸುನಿಲ್‍ಕುಮಾರ್ ಅವರನ್ನು ಶಾಲೆಯ ಮುಖ್ಯೋಪಾದ್ಯಾಯನಿ ಹೇಮಾಕುಮಾರಿ ಶಾಲು ಹೊದೆಸಿ, ಫಲತಾಂಬೂಲ ನೀಡಿ ಗೌರವಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಗ್ರಾ.ಪಂ. ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಆಯ್ಕೆಯಾಗಿರುವ ನನ್ನನು ಶಾಲೆಯ ಶಿಕ್ಷಕ ಹಾಗೂ ವಿದ್ಯಾರ್ಥಿ ವೃಂದವು ಪ್ರಪ್ರಥಮವಾಗಿ ಗೌರವಿಸುವ ಮೂಲಕ ನನ್ನ ಮೇಲೆ ಇರಿಸಿರುವ ಅಭಿಮಾನಕ್ಕೆ ಚಿರಋಣಿಯಾಗಿದ್ದೇನೆ. ಮುಂದಿನ ದಿನಗಳಲ್ಲಿಯೂ ಶಾಲೆಯ ಸರ್ವೊತ್ತೋಮುಖ ಅಭಿವೃದ್ಧಿಗೆ ಪೂರಕವಾಗಿ ಆದ್ಯತೆಯನ್ನು ನೀಡುವ ಭರವಸೆಯನ್ನು ವ್ಯಕ್ತಪಡಿಸಿದರು.
ಈ ಸಂದರ್ಭ ಶಿಕ್ಷಕಿಯಾರಾದ ಶೈಲಾ ಜಾಯ್, ಮೀನಾ ಕುಮಾರಿ,ಅನಿತಾ, ಅಕ್ಷರ ದಾಸೋಹದ ಶ್ರೀಜಾ, ಹೀನ ಹಾಗೂ ವಿದ್ಯಾರ್ಥಿಗಳು ಇದ್ದರು.







