ಮಡಿಕೇರಿ ಆ.13 : ಜಗತ್ತಿನ ಜನಸಂಖ್ಯೆ ಕೃಷಿಯನ್ನೇ ಅವಲಂಭಿಸಿದ್ದು, ಕೃಷಿಯೇ ಜನರ ಜೀವಾಳವಾಗಿದೆ. ಈ ಹಿನ್ನೆಲೆಯಲ್ಲಿ ಆಹಾರ ಉತ್ಪಾದನಾ ಕ್ಷೇತ್ರಕ್ಕೆ ತಾಂತ್ರಿಕತೆಯ ಸ್ಪರ್ಶದ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅಭಿಪ್ರಾಯಪಟ್ಟಿದ್ದಾರೆ
ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾಲಯ ವಿಸ್ತರಣ ಘಟಕ ಮಡಿಕೇರಿ ಇದರ ವತಿಯಿಂದ ಪೊನ್ನಂಪೇಟೆ ನಲ್ಲೂರು ಗ್ರಾಮದ ಪ್ರಗತಿಪರ ಕೃಷಿಕ ಸೋಮೇಂಗಡ ಗಣೇಶ್ ತಿಮ್ಮಯ್ಯ ಅವರ ಭತ್ತದ ಗದ್ದೆಯಲ್ಲಿ ಯಾಂತ್ರೀಕೃತ ಭತ್ತ ನಾಟಿಯ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ, ಕೊಡಗು ಜಿಲ್ಲೆಯ ಜಮ್ಮಾ ಭೂಮಿಗಳು ಮೊದಲು ಭತ್ತದ ಗದ್ದೆಗಳಾಗಿದ್ದು, ಅತೀ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಬೆಳೆಯಾಗುತ್ತಿತ್ತು. ಕೃಷಿ ಸಂಬಂಧಿತ ಜಮ್ಮಾಬಾಣೆಗಳನ್ನು ಜಾನುವಾರುಗಳನ್ನು ಮೇಯಿಸಲು ಬಳಸಲಾಗುತ್ತಿತ್ತು. ಕಾಫಿ ಬೆಳೆ ಕಾಲಿಟ್ಟ ಬಳಿಕ ಆರ್ಥಿಕತೆಯ ದೃಷಿಯಿಂದ ಅತ್ತ ಕಡೆ ಕೃಷಿಕರು ಮುಖ ಮಾಡಿದರು ಎಂದು ಹೇಳಿದರು. ಈ ಮೊದಲು ಕೊಡಗು ಜಿಲ್ಲೆಯಲ್ಲಿ ಅತೀ ಹೆಚ್ಚು ಪ್ರಮಾಣದಲ್ಲಿ ಭತ್ತ ಬೆಳೆಸಲಾಗುತ್ತಿತ್ತು. ಇದೀಗ ಮತ್ತೆ ಭತ್ತವನ್ನು ಅಧಿಕವಾಗಿ ಬೆಳೆಯುವ ಮೂಲಕ ಕೊಡಗು ಜಿಲ್ಲೆ ಅತೀ ಹೆಚ್ಚು ಭತ್ತ ಬೆಳೆಯುವ ಪ್ರದೇಶವಾಗಿ ಗುರುತಿಸಿಕೊಳ್ಳುವಂತಾಗಬೇಕು ಎಂದು ಆಶಿಸಿದರು. ಜನ ಸಂಖ್ಯೆ ಹೆಚ್ಚಿದಂತೆ ಆಹಾರ ಉತ್ಪಾದನೆಯಲ್ಲೂ ಏರಿಕೆ ಕಾಣುವಂತಾಗಿದೆ. ಈ ದಿಸೆಯಲ್ಲಿ ಕೃಷಿಗೆ ತಾಂತ್ರಿಕತೆ ಅಳವಡಿಕೆಯ ಅಗತ್ಯವಿದೆ. ಕೃಷಿ ವಿಶ್ವವಿದ್ಯಾನಿಲಯಗಳು ಈ ಕುರಿತು ರೈತರಿಗೆ ತರಬೇತಿ ಮತ್ತು ಮಾಹಿತಿ ನೀಡುತ್ತಿರುವುದು ಉತ್ತಮ ವಿಚಾರ ಎಂದು ಹೇಳಿದರು.
ಇಂದು ಭತ್ತದ ಕೃಷಿ ಲಾಭದಾಯಕವಾಗಿಲ್ಲ ಎಂಬ ಕಾರಣದಿಂದ ರೈತರು ಭತ್ತ ಬೆಳೆಯುವುದನ್ನು ಕೈ ಬಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭತ್ತ ಬೆಳೆಯುವ ರೈತರಿಗೆ ಸರಕಾರ ಪ್ರೋತ್ಸಾಹಿಸಬೇಕಿದೆ. ಈ ಹಿಂದೆಯೂ ರೈತರಿಗೆ ಪ್ರೋತ್ಸಾಹ ನೀಡಬೇಕೆಂದು ಸರಕಾರವನ್ನು ಒತ್ತಾಯಿಸಲಾಗಿತ್ತು. ಇದೀಗ ಮತ್ತೆ ಭತ್ತ ಬೆಳೆಯುವ ರೈತರನ್ನು ಪ್ರೋತ್ಸಾಹಿಸಲು ಸರಕಾರವನ್ನು ಒತ್ತಾಯ ಮಾಡಲಾಗುತ್ತದೆ. ಅನ್ನಭಾಗ್ಯ ಯೋಜನೆಗೆ ಅಕ್ಕಿಯನ್ನು ಬಳಸಲಾಗುತ್ತಿದ್ದು, ರೈತರಿಗೆ ಮತ್ತಷ್ಟು ಬೆಂಬಲ ದೊರೆತಲ್ಲಿ ಸರಕಾರದ ನೀತಿ, ರೈತರು ಹಾಗೂ ಬಡ ಜನರಿಗೂ ಅನುಕೂಲವಾಗಲಿದೆ. ಆ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಪೊನ್ನಣ್ಣ ಭರವಸೆ ನೀಡಿದರು.
::: ಶಾಸಕರಿಂದ ಭತ್ತದ ನಾಟಿ :::
ಸೋಮೇಂಗಡ ಗಣೇಶ್ ತಿಮ್ಮಯ್ಯ ಅವರ ಭತ್ತದ ಗದ್ದೆಯಲ್ಲಿ ಸ್ವತಃ ಶಾಸಕ ಪೊನ್ನಣ್ಣ ಅವರೇ ನಾಟಿ ಯಂತ್ರದ ಮೂಲಕ ಎರಡು ಸುತ್ತು ಭತ್ತದ ನಾಟಿ ಕಾರ್ಯ ಮಾಡಿದರು. ಬಳಿಕ ಕೊಡಗಿನ ಸಂಪ್ರದಾಯದಂತೆ ಭತ್ತದ ಸಸಿ ಮಡಿಗಳನ್ನು ಹಿಡಿದು ಗದ್ದೆಯಲ್ಲಿ ನಾಟಿ ಮಾಡುವ ಮೂಲಕ ಗಮನ ಸೆಳೆದರು. ಈ ಸಂದರ್ಭ ಕೃಷಿಕ ಸೋಮೇಂಗಡ ಗಣೇಶ್ ತಿಮ್ಮಯ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜಾ ಉತ್ತಪ್ಪ, ಕೃಷಿ ವಿ.ವಿ. ವಿದ್ಯಾರ್ಥಿಗಳೂ ಮತ್ತು ಸಾರ್ವಜನಿಕರು ಕೂಡ ನಾಟಿ ಕಾರ್ಯದಲ್ಲಿ ಕೈ ಜೋಡಿಸಿದರು.
Breaking News
- *ಎಂ.ಎಂ.ಸುಪ್ರಿತಾಗೆ ಚಿನ್ನದ ಪದಕ*
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*
- *ಕಳೆದು ಹೋಗಿದೆ*
- *ಫೆ.27 ಮತ್ತು 28 ರಂದು ಕೊಡವ ಬಲ್ಯನಮ್ಮೆ : ವಿವಿಧ ಸ್ಪರ್ಧೆಗಳಿಗೆ ಆಹ್ವಾನ*
- *ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*