ಮಡಿಕೇರಿ ಆ.13 : ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆ ನೆಹರು ನಗರದ ನಿವಾಸಿ ಎಂ.ಕೆ.ಸಜೀರ್(31) ಆರೋಪಿಯಾಗಿದ್ದು, 205 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
ವಿರಾಜಪೇಟೆಯ ಬಿಟ್ಟಂಗಾಲ ಬಳಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿದ ಹಿನ್ನೆಲೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಎಂ.ಕೆ.ಸಜೀರ್ ನನ್ನು ಮಾಲು ಸಹಿತ ಬಂಧಿಸಿದರು.
ಮಡಿಕೇರಿ ಉಪ ವಿಭಾಗದ ಡಿವೈಎಸ್‌ಪಿ ಎಂ.ಜಗದೀಶ್, ವಿರಾಜಪೇಟೆ ಪಟ್ಟಣದ ವೃತ್ತ ನಿರೀಕ್ಷಕ ಬಿ.ಎಸ್.ಶಿವರುದ್ರಪ್ಪ, ಗ್ರಾಮಾಂತರ ಠಾಣಾಧಿಕಾರಿ ಸಿ.ಸಿ.ಮಂಜುನಾಥ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.








