ಮಡಿಕೇರಿ ಆ.13 : ಕೊಡಗು ಪತ್ರಕರ್ತರ ಸಂಘ ಹಾಗೂ ಕೊಡಗು ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಮಂಜಿನ ನಗರಿ ಛಾಯಾಗ್ರಾಹಕರ ಸಂಘದ ಆಶ್ರಯದಲ್ಲಿ ಆಗಸ್ಟ್ 19ರಂದು ಮಡಿಕೇರಿಯಲ್ಲಿ ವಿಶ್ವ ಛಾಯಾಚಿತ್ರ ದಿನವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ಅಂಗವಾಗಿ ಪತ್ರಕರ್ತರಿಗೆ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಸಂಘದ ಹಿರಿಯ ಸಲಹೆಗಾರರು ಶಕ್ತಿ ದಿನಪತ್ರಿಕೆ ಸಲಹಾ ಸಂಪಾದಕರಾದ ಬಿ.ಜಿ.ಅನಂತಶಯನ ಅವರು ತಮ್ಮ ಪುತ್ರಿ ಡಾ.ಅನುಶ್ರೀ ಅವರ ಹ್ಯಾಪಿ ಟೀತ್ ಡೆಂಟಲ್ ಕ್ಲಿನಿಕ್ ಹೆಸರಿನಲ್ಲಿ ಸ್ಥಾಪಿಸಿರುವ ‘ಮಾನವೀಯ ಮೌಲ್ಯ’ಗಳನ್ನು ಒಳಗೊಂಡ ಅತ್ಯುತ್ತಮ ಛಾಯಾಚಿತ್ರ ಪ್ರಶಸ್ತಿಗೆ ಛಾಯಾ ಚಿತ್ರಗಳನ್ನು ಕಳುಹಿಸಬಹುದಾಗಿದೆ. 2023ರ ಜನವರಿಯಿಂದ 2023ರ ಆಗಸ್ಟ್ 1ರೊಳಗೆ ತೆಗೆದ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಕಳುಹಿಸಬೇಕು. ಛಾಯಾಚಿತ್ರವನ್ನು ಎಡಿಟ್ ಮಾಡುವಂತಿಲ್ಲ.
ಅದೇ ರೀತಿ ಕೊಡಗು ಪತ್ರಕರ್ತರ ಸಂಘದ ವತಿಯಿಂದ ಕೊಡಗಿನ ಕೃಷಿಗೆ ಸಂಬಂಧಿಸಿದಂತೆ ನೀಡುವ ಅತ್ಯುತ್ತಮ ಛಾಯಾಚಿತ್ರ ಪ್ರಶಸ್ತಿ ಹಾಗೂ ಕೊಡಗಿನ ಜಲಪಾತಗಳ ವೈಭವಕ್ಕೆ ಸಂಬಂಧಿಸಿದ ವೀಡಿಯೋ ಗ್ರಫಿ ಪ್ರಶಸ್ತಿಗೆ ವೀಡಿಯೋ ಹಾಗೂ ಛಾಯಾಚಿತ್ರಗಳನ್ನು ಕಳುಹಿಸಬಹುದಾಗಿದೆ. 2023ರ ಜೂನ್ 1ರಿಂದ 2023ರ ಆಗಸ್ಟ್ 17ರ ಸಂಜೆ 5 ಗಂಟೆಯ ಒಳಗೆ ತೆಗೆದ ವೀಡಿಯೋ ಹಾಗೂ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಕಳುಹಿಸಬೇಕು. ಎರಡು ವಿಭಾಗದಲ್ಲೂ ಪ್ರಥಮ ಹಾಗೂ ದ್ವಿತೀಯ ಬಹುಮಾನ ನೀಡಲಾಗುತ್ತದೆ. ಆಸಕ್ತರು ಆ.17 ರೊಳಗೆ ಪ್ರಧಾನ ಕಾರ್ಯದರ್ಶಿ, ಕೊಡಗು ಪತ್ರಕರ್ತರ ಸಂಘ, ಕೆ/ಆಫ್ ಕೊಡಗು ಚಾನೆಲ್, ಪೆನ್‌ಶನ್ ಲೈನ್. ಮಡಿಕೇರಿ-571201 ಈ ವಿಳಾಸಕ್ಕೆ ಅಥವಾ kodagupathrakartharasangha@gmail.com ಈ ವಿಳಾಸಕ್ಕೆ ಛಾಯಾಚಿತ್ರ ಹಾಗೂ ವೀಡಿಯೋಗಳನ್ನು ಕಳುಹಿಸಬಹುದಾಗಿದೆ ಎಂದು ಕೊಡಗು ಪತ್ರಕರ್ತರ ಸಂಘದ ಸಹ ಕಾರ್ಯದರ್ಶಿ ಪ್ರಸಾದ್ ಸಂಪಿಗೆಕಟ್ಟೆ ತಿಳಿಸಿದ್ದಾರೆ.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*