ಮಡಿಕೇರಿ ಆ.14 : “ಜಾತ್ಯಾತೀತತೆ ಭಾರತದ ಧರ್ಮ” ಎಂಬ ಧ್ಯೇಯ ವಾಕ್ಯದೊಂದಿಗೆ ಆ.15 ರ ಸ್ವಾತಂತ್ರ್ಯೋತ್ಸವದಂದು ಎಸ್‍ವೈಎಸ್ ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ನೆಲ್ಯಾಹುದಿಕೇರಿಯಲ್ಲಿ ನಡೆಯಲಿರುವ ರಾಷ್ಟ್ರ ರಕ್ಷಾ ಸಂಗಮ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಎಸ್‍ವೈಎಸ್ ಕೊಡಗು ಜಿಲ್ಲಾ ಸಮಿತಿ ಕರೆ ನೀಡಿದೆ.
ಭಾರತ ಮಣ್ಣಿನ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಪುರುಷರನ್ನು ಎಂದಿಗೂ ನೆನಪಿಸಬೇಕಾಗಿದೆ. ಜಾತಿ ಭೇದ ಮರೆತು ಒಗ್ಗಟ್ಟಿನ ಹೋರಾಟ ನಡೆಸಿದ ಫಲವಾಗಿ ದೇಶ 1947ರಲ್ಲಿ ಪಡೆದ ಸ್ವಾತಂತ್ರ್ಯ, ಹಲವಾರು ಹೋರಾಟಗಾರರ ಪ್ರಾಣತ್ಯಾಗದ ಫಲವಾಗಿದೆ ಎಂಬುದನ್ನು ಪ್ರತ್ಯೇಕವಾಗಿ ಸ್ಮರಿಸಬೇಕಾಗಿದೆ. ದೇಶದ ಸೌಹಾರ್ದತೆಯ ಉಳಿವಿಗಾಗಿ, ಜಾತ್ಯಾತೀತ ಬಲಿಷ್ಠ ಭಾರತದ ನಿರ್ಮಾಣಕ್ಕಾಗಿ ಎಸ್ ವೈ ಎಸ್ ಕೊಡಗು ಜಿಲ್ಲಾ ಸಮಿತಿಯು ಹಮ್ಮಿಕೊಂಡಿರುವ ರಾಷ್ಟ್ರ ರಕ್ಷಾ ಸಂಗಮವನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯ. ಸರ್ವ ಧರ್ಮ ಮುಖಂಡರುಗಳು, ಜಿಲ್ಲೆಯ ಶಾಸಕರುಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ನೇತಾರರು ಭಾಗವಹಿಸುವ ಪ್ರಸ್ತುತ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಎಸ್ ಕೆ ಎಸ್ ಎಸ್ ಎಫ್ ಜಿಲ್ಲಾಧ್ಯಕ್ಷ ತಮ್ಲೀಖ್ ದಾರಿಮಿ ಮಡಿಕೇರಿ ಹಾಗೂ ಪ್ರಧಾನ ಕಾರ್ಯದರ್ಶಿ ಜಂಶೀರ್ ವಾಫಿ ಗೋಣಿಕೊಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.