ಮಡಿಕೇರಿ ಆ.14 : ಮಡಿಕೇರಿ ತಾಲ್ಲೂಕಿನ ಮೇಕೇರಿ ಗ್ರಾ.ಪಂ ಗೆ ಸ್ವಂತ ಕಟ್ಟಡವಿಲ್ಲದೆ ಸಾರ್ವಜನಿಕರ ಕೆಲಸಗಳಿಗೆ ಅಡಚಣೆಯಾಗುತ್ತಿರುವುದರಿಂದ ತಕ್ಷಣ ಸ್ವಂತ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾ.ಪಂ ಸದಸ್ಯರುಗಳಾದ ಅಬ್ದುಲ್ ಖಾದರ್, ಎಂ.ಯು.ಹನೀಫ್ ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಂಚಾಯ್ತಿ ಸದಸ್ಯರು, ಸುಮಾರು 7 ವರ್ಷಗಳ ಹಿಂದೆ ಹಾಕತ್ತೂರು ಗ್ರಾ.ಪಂ ಯಿಂದ ಬೇರ್ಪಟ್ಟು ಪ್ರತ್ಯೇಕವಾಗಿ ರಚನೆಯಾದ ಮೇಕೇರಿ ಗ್ರಾ.ಪಂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಬಳಿ ಕೊಠಡಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಆದ್ದರಿಂದ ಪಂಚಾಯ್ತಿಗೆ ಸ್ವಂತ ಕಟ್ಟಡದ ಅಗತ್ಯವಿದೆ ಎಂದರು.
ಕಿರಿಯ ಪ್ರಾಥಮಿಕ ಶಾಲೆ ಪಕ್ಕದಲ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಇದರ ಬಳಿಯೇ ಗ್ರಾ.ಪಂ ಕಟ್ಟಡ ನಿರ್ಮಾಣ ಮಾಡಬೇಕೆನ್ನುವ ಅಭಿಲಾಷೆ ಎಲ್ಲಾ ಗ್ರಾಮಸ್ಥರದ್ದಾಗಿದೆ. ಈ ಹಿನ್ನೆಲೆ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಚರ್ಚೆ ಮಾಡಿ ಆರೋಗ್ಯ ಕೇಂದ್ರದ ಪಕ್ಕದಲ್ಲಿ ಪಂಚಾಯಿತಿ ಕಟ್ಟಡ ನಿರ್ಮಾಣ ಮಾಡುವ ಕುರಿತು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿತ್ತು.
ಇತ್ತೀಚೆಗೆ ಆರೋಗ್ಯ ಕೇಂದ್ರದ ಪಕ್ಕದಲ್ಲಿ ಜಿ.ಪಂ ವತಿಯಿಂದ ಯೋಗ ಕೇಂದ್ರದ ಕಟ್ಟಡ ನಿರ್ಮಾಣ ಮಾಡಲಾಗಿದೆ. ಇಲ್ಲಿ ಗ್ರಾ.ಪಂ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುಷ್ಟು ಜಾಗವಿದ್ದರೂ ಯೋಜನೆ ವಿಳಂಬವಾಗುತ್ತಿದೆ. ಆದ್ದರಿಂದ ಆಡಳಿತ ವ್ಯವಸ್ಥೆ ಗ್ರಾ.ಪಂ ಗೆ ಸ್ವಂತ ಕಟ್ಟಡ ನಿರ್ಮಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಬ್ದುಲ್ ಖಾದರ್ ಹಾಗೂ ಎಂ.ಯು.ಹನೀಫ್ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಗ್ರಾಮಸ್ಥರಾದ ರಾಜೀವ ಲೋಚನ ಬಿ.ಪಿ ಹಾಗೂ ನಿತಿನ್ ಓಡಿಯನ ಉಪಸ್ಥಿತರಿದ್ದರು.
Breaking News
- *ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ : ಕಾಂಗ್ರೆಸ್ ಕಾರ್ಯಕರ್ತ ಅಮಾನತು*
- *ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಮೇಲೆ ಹಲ್ಲೆ*
- *ಸಿಎನ್‌ಸಿಯಿಂದ ಅಂತರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ದಿನ ಆಚರಣೆ*
- *ಪದ್ಮಶ್ರೀ ಪುರಸ್ಕೃತ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಅಭಿನಂದನೆ*
- *‘ಕೃತಕ ಅಂಗಾಂಗಗಳ ಜೋಡಣೆ ಮತ್ತು ಆರೋಗ್ಯ ತಪಾಸಣೆ’ ಶಿಬಿರ : ಬಡವರಿಗೆ ಅಗತ್ಯ ಆರೋಗ್ಯ ಸೌಲಭ್ಯ : ಸಚಿವ ಭೋಸರಾಜು*
- *ರಾಜ್ಯದಲ್ಲೇ ವಿನೂತನ ಪ್ರಯತ್ನ : ‘ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ’ ಉದ್ಘಾಟನೆ*
- *ಕೆ.ಎಸ್.ದರ್ಶನ್ ಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ*
- *ಕಾಲ್ಚೆಂಡು ಪಂದ್ಯಾವಳಿ : ತ್ರಿವೇಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್*
- *ವಿರಾಜಪೇಟೆ : ವಿವಿಧತೆಯಲ್ಲಿ ಏಕತೆಕಂಡಿರುವ ಸಂವಿಧಾನವನ್ನು ಗೌರವಿಸುವಂತಾಗಬೇಕು : ವಕೀಲ ಪುಷ್ಪರಾಜ್*
- *ಸೋಮವಾರಪೇಟೆ : ಅಗ್ನಿಶಾಮಕ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*