ಕುಶಾಲನಗರ,ಆ.14 : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿಮಹೋತ್ಸವ ಆಚರಣಾ ಸಮಿತಿ ಇವರ ಸಹಯೋಗದಲ್ಲಿ ಪತ್ರಕರ್ತರ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ ಮಿಂಟನ್ ಪಂದ್ಯಾವಳಿಯು, ಕುಶಾಲನಗರದ ಜಂಪ್ ಸ್ಮಾಷ್ ಬ್ಯಾಡ್ ಮಿಂಟನ್ ಅಕಾಡೆಮಿಯ ಕ್ರೀಡಾಂಗಣದಲ್ಲಿ ನಡೆಯಿತು.
ಪತ್ರಕರ್ತರ ಜಿಲ್ಲಾ ಮಟ್ಟದ ಶಟಲ್ ಬ್ಯಾಟ್ ಮಿಂಟನ್ ಪಂದ್ಯಾವಳಿಯ ಸಿಂಗಲ್ಸ್ ವಿಭಾಗದಲ್ಲಿ ಆದರ್ಶ್ ಅವರು ಪ್ರಥಮ ಸ್ಥಾನ ಪದೆಡು, ಟ್ರೋಫಿ ಹಾಗೂ 5 ಸಾವಿರ ನಗದನ್ನು ಸ್ವೀಕರಿಸಿದರು. ಸಿಂಗಲ್ಸ್ ನಲ್ಲಿ ಲೋಕೇಶ್ ಕಾಟಲೇರಿಯವರು ದ್ವಿತೀಯ ಸ್ಥಾನ ಪಡೆದು, ಟ್ರೋಫಿ ಹಾಗೂ 3 ಸಾವಿರ ರೂ ನಗದನ್ನು ಸ್ವೀಕರಿಸಿದರು. ಸುಬ್ರಮಣಿಯವರು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟು, ಟ್ರೋಫಿ ಹಾಗೂ 1 ಸಾವಿರ ನಗದನ್ನು ಪಡೆದುಕೊಂಡರು. ನಾಲ್ಕನೇ ಸ್ಥಾನ ಪಡೆದ ವಿನೋದ್ ಅವರು, ಟ್ರೋಫಿ ಹಾಗೂ 500 ರೂನಗದನ್ನು ಪಡೆದುಕೊಂಡರು.
ಡಬಲ್ಸ್ ನಲ್ಲಿ ನವೀನ್ ಹಾಗೂ ವಿಶ್ವ ಕುಂಬೂರು ಅವರು ಪ್ರಥಮ ಸ್ಥಾನವನ್ನು ಅಲಂಕರಿಸಿ, ಟ್ರೋಫಿ ಹಾಗೂ 5 ಸಾವಿರ ನಗದನ್ನು ಸ್ವೀಕರಿಸಿದರು. ಸುಬ್ರಮಣಿ ಹಾಗೂ ಶಿವರಾಜ್ ಅವರು ದ್ವಿತೀಯ ಸ್ಥಾನ ಪಡೆದು, ಟ್ರೋಫಿ ಹಾಗೂ 3 ಸಾವಿರ ಟ್ರೋಫಿ ಸ್ವೀಕರಿಸಿದರು. ಲೋಕೇಶ್ ಹಾಗೂ ಸವಿತಾ ರೈ ಅವರು ತೃತೀಯ ಸ್ಥಾನ ಪಡೆದು, ಟ್ರೋಫಿ ಹಾಗೂ 1500 ರೂ ನಗದನ್ನು ಪಡೆದುಕೊಂಡರು. ವಿನೋದ್.ಕೆ.ಎಂ ಹಾಗೂ ಕೆ.ಬಿ.ಶಂಶುದ್ಧೀನ್ ಅವರು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟು, ಟ್ರೋಫಿ ಹಾಗೂ 1 ಸಾವಿರ ನಗದನ್ನು ತಮ್ಮದಾಗಿಸಿಕೊಂಡರು.
ಸಿಂಗಲ್ಸ್ ವಿಭಾಗದಲ್ಲಿ ಕೊಡಗಿನ 24 ಪತ್ರಕರ್ತರು ಭಾಗವಹಿಸಿದ್ದರು. ನಾಲ್ಕು ಪೂಲ್ ಗಳಾಗಿ ಆಟಗಾರರನ್ನು ವಿಂಗಡಿಸಿ, ಲೀಗ್ ಮಾದರಿಯಲ್ಲಿ ಪಂದ್ಯಾವಳಿಯನ್ನು ನಡೆಸಲಾಯಿತು. ಡಬಲ್ಸ್ ನಲ್ಲಿ 24 ಕೊಡಗಿನ ಆಟಗಾರರು ಭಾಗವಹಿಸಿದ್ದರು. ನಾಲ್ಕು ಪೂಲ್ ಗಳಾಗಿ ಆಟಗಾರರನ್ನು ವಿಂಗಡಿಸಲಾಯಿತು. ಅಂತರಾಷ್ಟ್ರೀಯ ಶಟಲ್ ಬ್ಯಾಡ್ ಮಿಂಟನ್ ಆಟಗಾರ್ತಿ ಜ್ಯೋತಿ ಸೋಮಯ್ಯ ತಾತಪಂಡರವರು, ಪಂದ್ಯಾವಳಿಯನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು. ನಿಲೀಶ ಜೋಜೋ ಹಾಗೂ ದ್ರುವ್ ಅವರು, ಪಂದ್ಯಾವಳಿಯಲ್ಲಿ ಯಾವುದೇ ಗೊಂದಲಗಳಿಲ್ಲದೇ ತೀರ್ಪುಗಾರಿಕೆಯನ್ನು ನೀಡಿದರು.
ಉದ್ಘಾಟನೆ: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿಮಹೋತ್ಸವ ಆಚರಣಾ ಸಮಿತಿ ಇವರ ಸಹಯೋಗದಲ್ಲಿ ಕುಶಾಲನಗರದ ಜಂಪ್ ಸ್ಮಾಷ್ ಬ್ಯಾಡ್ ಮಿಂಟನ್ ಅಕಾಡೆಮಿಯ ಕ್ರೀಡಾಂಗಣದಲ್ಲಿ ನಡೆದ ಪತ್ರಕರ್ತರ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ ಮಿಂಟನ್ ಪಂದ್ಯಾವಳಿಯನ್ನು ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಎ.ಆರ್.ಕುಟ್ಟರವರು ನೆರವೇರಿಸಿದರು.
ಸಮಾರೋಪ ಸಮಾರಂಭ: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿಮಹೋತ್ಸವ ಆಚರಣಾ ಸಮಿತಿ ಇವರ ಸಹಯೋಗದಲ್ಲಿ ನಡೆದ ಪತ್ರಕರ್ತರ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ ಮಿಂಟನ್ ಪಂದ್ಯಾವಳಿಯ ಸಮಾರೋಪ ಸಮಾರಂಭವು ಕುಶಾಲನಗರದ ಜಂಪ್ ಸ್ಮಾಷ್ ಬ್ಯಾಡ್ ಮಿಂಟನ್ ಅಕಾಡೆಮಿಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾ ರೈ, ಸುದ್ದಿಯ ಜಂಜಾಟದ ನಡುವೆ ಪತ್ರಕರ್ತರು ಶಟಲ್ ಬ್ಯಾಡ್ ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದಾರೆ. ಇದು ಪತ್ರಕರ್ತರ ಸುದ್ದಿಯ ಒತ್ತಡವನ್ನು ಕಡಿಮೆ ಮಾಡುತ್ತದೆ ಎಂದು ಕಾರ್ಯಕ್ರಮವನ್ನು ಉತ್ತಮವಾಗಿ ಆಯೋಜಿಸಿದ್ದಕ್ಕಾಗಿ ಹರ್ಷ ವ್ಯಕ್ತಪಡಿಸಿದರು.
ಪ್ರಾಸ್ತಾವಿಕ ನುಡಿ ನುಡಿದ ಪಂದ್ಯಾವಳಿಯ ಸಂಚಾಲಕ ಕೆ.ಬಿ.ಶಂಶುದ್ಧೀನ್, ಕಾರ್ಯಕ್ರಮದ ಯಶಸ್ವಿಗೆ ಕಾರಣರಾದ ದಾನಿಗಳಿಗೆ ಹಾಗೂ ಪಂದ್ಯಾವಳಿಯಲ್ಲಿ ಎಲ್ಲಾ ಪತ್ರಕರ್ತರಿಗೆ ಧನ್ಯವಾದಗಳನ್ನು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರೈಡ್ ಪ್ರಾಮರ್ಟೀಸ್ ಹಾಗೂ ಡೆವಲಪ್ಪರ್ಸ್ ನ ಮಾಲೀಕರಾದ ಎಚ್.ಪಿ.ರಂಜನ್ ಮಾತನಾಡಿ, ಸದಾ ಸುದ್ದಿಯಲ್ಲಿ ನಿರತರಾಗಿರುವ ಪತ್ರಕರ್ತರು ಕ್ರೀಡೆಯಲ್ಲಿ ತೊಗಗಿರುವುದು ಸಂತಸದ ವಿಷಯ ಎಂದರು.
ಅಂತರಾಷ್ಟ್ರೀಯ ಶಟಲ್ ಬ್ಯಾಡ್ ಮಿಂಟನ್ ಆಡಗಾರ್ತಿ ಜ್ಯೋತಿ ಸೋಮಯ್ಯ ತಾತಪಂಡ ಮಾತನಾಡಿ, ಆಟಗಾರರಿಗೆ ಕ್ರೀಡೆಗೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡದರು.
ಜಿಲ್ಲಾ ಸಂಘದ ಕ್ರೀಡಾ ಸಂಚಾಲಕರಾದ ಬಿ.ಜಿ.ಮಂಜುರವರು, ಆಟಗಾರರಿಗೆ ಹಾಗೂ ಆಯೋಕರಿಗೆ ಅಭಿನಂದಿಸಿದರು.
ಅಂತರಾಷ್ಟ್ರೀಯ ಶಟಲ್ ಬ್ಯಾಡ್ ಮಿಂಟನ್ ಆಟಗಾರ್ತಿ ಹಾಗೂ ತರಬೇತುದಾರರಾದ ಜ್ಯೋತಿ ಸೋಮಯ್ಯ ತಾತಪಂಡ ಅವರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು. ಪ್ರೈಡ್ ಪ್ರಾಪರ್ಟೀಸ್ ಆಂಡ್ ಡೆವಲಪರ್ಸ್ ನ ಮಾಲೀಕರಾದ ಎಚ್.ಪಿ.ರಂಜನ್ ಹಾಗೂ ಕಲಾವಿದರು ಹಾಗೂ ಚಲನಚಿತ್ರ ನಿರ್ದೇಶಕರಾದ ಗಯಾಜ಼್ ಕುಷಾಲ್ ಅವರಿಗೆ ಗೌರವ ಸಮರ್ಪಣೆ ನೀಡಲಾಯಿತು.
ನಂತರ ಬಹುಮಾನ ವಿಜೇತರಿಗೆ ವೇದಿಕೆಯಲ್ಲಿ ಗಣ್ಯರು ಬಹುಮಾನ ವಿತರಿಸಿದರು. ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರಮೋಹನ್ ಸ್ವಾಗತಿಸಿದರು. ಪತ್ರಕರ್ತರಾದ ನಂಜುಂಡಸ್ವಾಮಿರವರು ನಿರೂಪಿಸಿದರು. ಶಿವರಾಜುರವರು ವಂದಿಸಿದರು.
ವೇದಿಕೆಯಲ್ಲಿ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಎ.ಆರ್.ಕುಟ್ಟಪ್ಪ, ಕೊಡಗು ಪ್ರೆಸ್ ಕ್ಪಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಕ್ರೀಡಾ ಸಂಚಾಲಕರಾದ ಸಂತೋಷ್ ರೈ, ಪತ್ರಕರ್ತ ಎಚ್.ಸಿ.ಜಯಪ್ರಕಾಶ್, ಜಿಡಿಎಸ್ ಪ್ರಮುಖ ಮಹದೇವ್ ಇದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆ ಖಂಡನೆ : ಆರೋಪಿಯ ಗಡಿಪಾರಿಗೆ ಆಗ್ರಹ*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶ*
- *ನ.29ರಂದು ಕೊಡಗು ಜಿಲ್ಲಾ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆಯ 12ನೇ ವಾರ್ಷಿಕ ಮಹಾಸಭೆ*
- *ನ.30 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಮತ್ತು ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ*
- *ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್‌ಶಿಪ್ : ಶಶಾಂಕ್ ರಾಜ್ಯಮಟ್ಟಕ್ಕೆ ಆಯ್ಕೆ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್‌ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*