ಮಡಿಕೇರಿ ಆ.14 : ದಾಂಪತ್ಯ ಜೀವನಕ್ಕೆ ಕಾಲಿಡಲು ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ರೆಡಿ ಆಗಿದ್ದಾರೆ. ದೀರ್ಘ ಕಾಲದವರೆಗೆ ಸ್ನೇಹಿತರಾಗಿದ್ದ ಭುವನ್ ಮತ್ತು ಹರ್ಷಿಕಾ ಆ.24ರಂದು ವಿರಾಜಪೇಟೆಯ “ಅಮ್ಮತಿ ಕೊಡವ ಸಮಾಜ”ದಲ್ಲಿ ಹಸೆಮಣೆ ಏರಲಿದ್ದಾರೆ.
ಈಗಾಗಲೇ ಸಿನಿಮಾ ಹಾಗೂ ರಾಜಕೀಯ ಗಣ್ಯರಿಗೆ ಮದುವೆ ಆಮಂತ್ರಣ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಬಸವರಾಜ್ ಬೊಮ್ಮಾಯಿ, ಸಿನಿಮಾ ತಾರೆಯರಾದ ಶಿವರಾಜ್ ಕುಮಾರ್, ರವಿಚಂದ್ರನ್, ಗಣೇಶ್ , ದೊಡ್ಡಣ್ಣ, ಶ್ರೀನಾಥ್ ಜಯಮಾಲ, ಸುಧಾರಾಣಿ, ತಾರಾ, ಮಾಲಾಶ್ರೀ, ಅನುಪ್ರಭಾಕರ್ ಅಮೂಲ್ಯ, ದಿಗಂತ್ ,ಅಶ್ವಿನಿ ಪುನೀತ್ ರಾಜ್ ಕುಮಾರ್ , ರಾಘವೇಂದ್ರ ರಾಜ್ ಕುಮಾರ್ ,ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ, ರಮೇಶ್ ಅರವಿಂದ್, ದುನಿಯಾ ವಿಜಯ್ ಸೇರಿದಂತೆ ಅನೇಕ ಗಣ್ಯರಿಗೆ ಆಮಂತ್ರಣ ನೀಡಿದ್ದಾರೆ.










