ಮಡಿಕೇರಿ ಆ.14 : ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2023-24 ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ ತರಬೇತಿ ನೀಡಲು ಮಾಸಿಕ ರೂ.5 ಸಾವಿರಗಳ ತರಬೇತಿ ಭತ್ಯೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 11 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಯನ್ನು ಹಾಗೂ ಇಲಾಖಾ ವೆಬ್‍ಸೈಟ್ www.dom.karnataka.gov.in ನ್ನು ಮತ್ತು ಕಚೇರಿ ದೂ.ಸಂ.08272-225528/ 220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕರಿ ಬಿ.ಎಂ.ದಿವಾಕರ ತಿಳಿಸಿದ್ದಾರೆ.







