ಮಡಿಕೇರಿ ಆ.14 : ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿದರು. ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿರುವ ರೋಗಿಗಳ ಕುಶಲೋಪರಿ ವಿಚಾರಿಸಿ ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಇದೇ ಸಂದರ್ಭ ಗ್ರಾಮೀಣ ಪ್ರದೇಶ ಹೆಚ್ಚಾಗಿರುವ ಈ ಭಾಗದಲ್ಲಿ ಆಸ್ಪತ್ರೆಗೆ ಇನ್ನೂ ಹೆಚ್ಚಿನ ವೈದ್ಯಕೀಯ ಯಂತ್ರೋಪಕರಣ ಗಳನ್ನು ಅಳವಡಿಸಿ, ಜನತೆಗೆ ಅನುಕೂಲ ಮಾಡಿಕೊಡುವಂತೆ ಶಾಸಕರು ಸಚಿವರಿಗೆ ಮನವಿ ಮಾಡಿದರು.
ಉಸ್ತುವಾರಿ ಸಚಿವರು ಈ ಬಗ್ಗೆ ಪೂರಕವಾಗಿ ಸ್ಪಂದಿಸಿ ಸರಕಾರದ ಮಟ್ಟದಲ್ಲಿ ಗಮನ ಸೆಳೆಯುವುದಾಗಿ ಭರವಸೆ ನೀಡಿದರು.