ಮಡಿಕೇರಿ ಆ.15 : ಕೊಡಗು ಜಿಲ್ಲಾಡಳಿತ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯು ನಗರದ ಕೋಟೆ ಆವರಣದಲ್ಲಿ ಅರ್ಥಪೂರ್ಣವಾಗಿ ಜರುಗಿತು.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಧ್ವಜಾರೋಹಣ ನೆರವೇರಿಸಿದರು.
ಶಾಸಕ ಡಾ.ಮಂತರ್ ಗೌಡ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಇತರರು ಪಾಲ್ಗೊಂಡಿದ್ದರು.
ಪ್ರಸ್ತುತ ಸರ್ಕಾರದ ಸಾಧನೆ ಸಂಬಂಧ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹೊರತಂದಿರುವ ‘ಪ್ರಗತಿಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ’ ಕಿರುಹೊತ್ತಿಗೆಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.