ಸುಂಟಿಕೊಪ್ಪ,ಆ.15 : ಸುಂಟಿಕೊಪ್ಪ ಗ್ರೇಡ್ 1 ಗ್ರಾ.ಪಂ ಅಧ್ಯಕ್ಷರಾಗಿ ಪಿ.ಆರ್.ಸುನಿಲ್‍ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಶಿವಮ್ಮ ಮಹೇಶ್ ಅಧಿಕಾರ ಸ್ವೀಕರಿಸಿದರು.
ಸುಂಟಿಕೊಪ್ಪ ಗ್ರಾಮ 2ನೇ ಅವಧಿ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಮತದಾನದಲ್ಲಿ ಆಯ್ಕೆಗೊಂಡ ಪಿ.ಆರ್.ಸುನಿಲ್ ಕುಮಾರ್ ಅವರಿಗೆ ಮಾಜಿ ಅಧ್ಯಕ್ಷೆ ಶಿವಮ್ಮ ಮಹೇಶ್ ‘ಪಂಚಾಯಿತಿ ಕಾನೂನು’ ಪುಸ್ತಕವನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.
ಉಪಾಧ್ಯಕ್ಷ 2ನೇ ಅವಧಿಗೆ ನಡೆದ ಮತದಾನದಲ್ಲಿ ಆಯ್ಕೆಗೊಂಡ ಶಿವಮ್ಮ ಮಹೇಶ್ ಅವರಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್ ಅಧಿಕಾರ ಹಸ್ತಾಂತರಿಸಿದರು.
ನೂತನವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಪದಗ್ರಹಣದಲ್ಲಿ ಹೂವಿನ ಹಾರ ಶಾಲುಗಳು ಹಾಕಿ ಉತ್ತಮ ಆಡಳಿತ ನೀಡುವಂತೆ ಗ್ರಾಮಸ್ಥರು, ಹಿರಿಯ ಮುಖಂಡರು, ಸಿಬ್ಬಂದಿಗಳು ಹಾಗೂ ಪೌರಕಾರ್ಮಿಕರು ಶುಭಹಾರೈಸಿದರು.
ಈ ಸಂದರ್ಭ ಪಂಚಾಯಿತಿ ಸದಸ್ಯರುಗಳಾದ ಬಿ.ಎಂ.ಸುರೇಶ್, ಮಂಜುನಾಥ್, ರಫೀಕ್‍ಖಾನ್, ಸೋಮನಾಥ್, ವಸಂತಿ, ಶಾಂತಿ, ಗೀತಾ, ಮಂಜುಳ, ರೇಷ್ಮ, ಮಾಜಿ ಸದಸ್ಯ ಪಿ.ಆರ್.ಸುಕುಮಾರ್, ಕೆ.ಇ.ಕರೀಂ,ರಹೆನಾ ಸುಲ್ತಾನ್, ಬಿಜೆಪಿ ಪಕ್ಷದ ಹಿರಿಯ ಮುಖಂಡ ವೈ.ಎಂ.ಕರುಂಬಯ್ಯ, ಸುಂಟಿಕೊಪ್ಪ ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಡಿ.ನರಸಿಂಹ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್, ಪಂಚಾಯಿತಿ ಸಿಬ್ಬಂದಿಗಳು, ಪೌರಕಾರ್ಮಿಕರು ಇದ್ದರು.
Breaking News
- *ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್‌ಶಿಪ್ : ಶಶಾಂಕ್ ರಾಜ್ಯಮಟ್ಟಕ್ಕೆ ಆಯ್ಕೆ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*
- *ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ*
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*