ಮಡಿಕೇರಿ ಆ.14 ಕರ್ನಾಟಕ ಸರ್ಕಾರ, ಇಂಧನ ಇಲಾಖೆ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಉಚಿತ ಬೆಳಕು, ಸುಸ್ಥಿರ ಬದುಕು ‘ಗೃಹ ಜ್ಯೋತಿ ಯೋಜನೆಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಚಾಲನೆ ನೀಡಿದರು.
ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ,ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಹಾಜರಿದ್ದರು.









