ಮಡಿಕೇರಿ ಆ.15 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಧ್ವಜಾರೋಹಣವನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮದ ಉತ್ತಪ್ಪ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭ ಕೆಪಿಸಿಸಿ ಮಾಧ್ಯಮ ಸಂವಹನ ವಕ್ತಾರ ಟಿ.ಪಿ.ರಮೇಶ್, ಕೆಪಿಸಿಸಿ ಕಾರ್ಯದರ್ಶಿ ಚಂದ್ರಮೌಳಿ, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ , ಮಹಿಳಾ ಘಟಕದ ಅಧ್ಯಕ್ಷೆ ಸುರಯ್ಯ ಅಬ್ರಾರ್, ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಮಡಿಕೇರಿ ನಗರಾಧ್ಯಕ್ಷೆ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ, ಹಿರಿಯ ಕಾಂಗ್ರೆಸ್ ನಾಯಕರು, ಮಡಿಕೇರಿ ನಗರ ಕಾಂಗ್ರೆಸ್ ಕಾರ್ಯಕರ್ತರು ಮತ್ತು ವಿವಿಧ ಜಿಲ್ಲಾ ಘಟಕಗಳ ಅಧ್ಯಕ್ಷರು, ಬ್ಲಾಕ್ ಘಟಕಗಳ ಅಧ್ಯಕ್ಷರು, ನಗರ ಘಟಕಗಳ ಅಧ್ಯಕ್ಷರು ಹಾಜರಿದ್ದರು. ಸೇವಾದಳದ ಅಧ್ಯಕ್ಷರ ಕಾನೇ ಹಿತ್ಲು ಮೊಣ್ಣಪ್ಪ ಕಾರ್ಯಕ್ರಮದ ಜವಾಬ್ದಾರಿ ವಹಿಸಿಕೊಂಡಿದ್ದರು.








