ಮಡಿಕೇರಿ ಆ.15 : ಕಾಟಕೇರಿಯ ಕೂರನಬಾಣೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ನಿವೃತ್ತ ಸೈನಿಕ ತಳೂರು ಕಾಳಪ್ಪ ಧ್ವಜಾರೋಹಣ ನೆರವೇರಿ ದಿನದ ಮಹತ್ವ ತಿಳಿಸಿದರು.
ಸ್ವಾತಂತ್ರ್ಯೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಬೇಕು, ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಮಹನೀಯರನ್ನು ಪ್ರತಿನಿತ್ಯ ಸ್ಮರಿಸುವಂತಾಗಬೇಕು. ಅವರ ಆದರ್ಶಗಳನ್ನು ಪಾಲಿಸಬೇಕೆಂದು ಕರೆ ನೀಡಿದರು.
ಮದೆ ಗ್ರಾ.ಪಂ ಮಾಜಿ ಅಧ್ಯಕ್ಷೆ ಬಿ.ಸಿ.ಗಿರಿಜಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರತೀ ವರ್ಷ ಸ್ವಾತಂತ್ರ್ಯ ದಿನಾಚರಣೆಯನ್ನು ಹಬ್ಬದ ರೀತಿಯಲ್ಲಿ ಆಚರಿಸಬೇಕೆಂದು ಹೇಳಿದರು.
ಈ ಸಂದರ್ಭ ಮದೆ ಗ್ರಾ.ಪಂ ಸದಸ್ಯೆ ಪಿ.ಎ.ಚಂದ್ರಾವತಿ, ಅಂಗನವಾಡಿ ಕಾರ್ಯಕರ್ತೆ ನಳಿನಿ ಹಾಗೂ ಶ್ರೀದೇವಿ, ಶ್ರೀ ಲಕ್ಷ್ಮಿ ಸ್ವಸಾಹ ಸಂಘದ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು, ಪುಟಾಣಿ ಮಕ್ಕಳು ಹಾಜರಿದ್ದರು.








