ಮಡಿಕೇರಿ ಆ.15 : ನಗರದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿ 77ನೇ ಸ್ವಾತಂತ್ರ್ಯೋತ್ಸವವನ್ನು ಅರ್ತಪೂರ್ಣವಾಗಿ ಆಚರಿಸಲಾಯಿತು.
ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಆರ್.ಸೋಮಣ್ಣ ಧ್ವಜಾರೋಹಣ ನೆರವೇರಿಸಿದರು. ಒಕ್ಕೂಟದ ಕಾರ್ಯದರ್ಶಿ ಪೇರಿಯನ ಉದಯ ಕುಮಾರ್, ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ, ವ್ಯವಸ್ಥಾಪಕ ಮತ್ತಾರಿ ರಮೇಶ, ಪ್ರಮುಖರಾದ ಕುಂಬುಗೌಡನ ವಿನೋದ್ ಕುಮಾರ್, ಪುದಿಯನೆರವನ ರೇವತಿ ರಮೇಶ್, ಪುದಿಯನೆರವನ ರಿಶಿತ್ ಮಾದಯ್ಯ ಮತ್ತಿತರರು ಹಾಜರಿದ್ದು ರಾಷ್ಟ್ರಧ್ವಜಕ್ಕೆ ಗೌರವ ಅರ್ಪಿಸಿ, ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.










