ಮಡಿಕೇರಿ ಆ.15 : ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ 77ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ನಗರದ ವಿದ್ಯಾ ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಿರಿಯರನ್ನು ಸ್ಮರಿಸಿದ ಅವರು ಬಲಿಷ್ಠ ಭಾರತ ನಿರ್ಮಾಣಕ್ಕೆ ಎಲ್ಲರೂ ಪಣ ತೊಡಬೇಕೆಂದು ಕರೆ ನೀಡಿದರು.
ಗೌಡ ವಿದ್ಯಾ ಸಂಘದ ಕಾರ್ಯದರ್ಶಿ ಪೇರಿಯನ ಉದಯ ಕುಮಾರ್, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಆರ್.ಸೋಮಣ್ಣ, ಸಂಘದ ನಿರ್ದೇಶಕರುಗಳು ಹಾಗೂ ಗೌಡ ಬಾಂಧವರು ಹಾಜರಿದ್ದು ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.










