ಮಡಿಕೇರಿ ಆ.15 : ಕಾಡಾನೆ ದಾಳಿಯಿಂದ ಮೃತಪಟ್ಟ ಅರೆಕಾಡು ನಿವಾಸಿ ದೇವಪ್ಪ ಅವರ ಮನೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಮತ್ತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ನಂತರ 10 ಲಕ್ಷ ರೂಪಾಯಿ ಮೊತ್ತದ ಪರಿಹಾರದ ಚೆಕ್ ಅನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಜರಿದ್ದರು.









