ಮಡಿಕೇರಿ ಆ.16 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೊಡಗಿನ ಗೌರಮ್ಮ ದತ್ತಿ ಕಾರ್ಯಕ್ರಮದಡಿ ಆ.24 ರಂದು ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮಡಿಕೇರಿಯ ಜೂನಿಯರ್ ಕಾಲೇಜು ಪ್ರೌಢಶಾಲಾ ಸಭಾಂಗಣದಲ್ಲಿ ಕಥೆ ಬರೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಅಲ್ಲದೆ ನಾಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಕಾರ್ಯಕ್ರಮದಡಿ ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕಥೆ ಬರೆಯುವ ಸ್ಪರ್ಧೆಯನ್ನು ಆ.25 ರಂದು ಆಯೋಜಿಸಲಾಗಿದೆ. ಈ ಎರಡೂ ಸ್ಪರ್ಧೆಗಳು ನಡೆಯಲಿದೆ. ಮಡಿಕೇರಿಯ ಜೂನಿಯರ್ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ. ಸ್ಪರ್ಧಿಸುವ ವಿದ್ಯಾರ್ಥಿಗಳು ಬೆಳಗ್ಗೆ 10 ಗಂಟೆಗೆ ತಮ್ಮ ಶಾಲೆಯ ಅಥವಾ ಕಾಲೇಜಿನ ಅನುಮತಿ ಪತ್ರದೊಂದಿಗೆ ಹಾಜರಿರಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










