ಮಡಿಕೇರಿ ಆ.16 : ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಮಳೆಯ ಕೊರತೆ ಎದುರಾಗಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಬರ ಬರುವ ಸಾಧ್ಯತೆಗಳಿದೆ. ಈ ಕಾರಣದಿಂದ ಮಳೆಗಾಗಿ ಪಾಡಿ ಶ್ರೀ ಇಗ್ಗುತ್ತಪ್ಪ ದೇವರ ಮೊರೆ ಹೋಗಲು ಅಖಿಲ ಕೊಡವ ಸಮಾಜ ನಿರ್ಧರಿಸಿದೆ. ಆ.17 ರಂದು ಬೆಳಗ್ಗೆ 10.30 ಗಂಟೆಗೆ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿವಿಧ ಕೊಡವ ಸಮಾಜ, ಸಂಘ ಸಂಸ್ಥೆಗಳು ಹಾಗೂ ಕೊಡಗಿನ ಮೂಲ ನಿವಾಸಿಗಳು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.










