ಮಡಿಕೇರಿ ಆ.16 : ನಿರ್ದೇಶನಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಇಲಾಖೆಗೆ ‘ಕಲ್ಯಾಣ ಸಂಘಟಕರು’ ‘ಸಿ’ ವೃಂದದ ಒಟ್ಟು 14 ಹುದ್ದೆಗಳಿಗೆ ಅರ್ಹ ಮಾಜಿ ಸೈನಿಕರಿಂದ (ಜೆಸಿಒ ಹಾಗೂ ತತ್ಸಮಾನ ರ‍್ಯಾಂಕ್ ) ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರಿ ಮುದ್ರಣಾಲಯಗಳಲ್ಲಿ ಲಭ್ಯವಿರುವ ಸರ್ಕಾರದಿಂದ ನಿಗಧಿಪಡಿಸಿದ ಅರ್ಜಿ ನಮೂನೆ 1 ನ್ನು ಭರ್ತಿ ಮಾಡಿ, ದ್ವಿಪ್ರತಿಯಲ್ಲಿ ಆ.25 ರೊಳಗೆ ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ನಂ.58, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭವನ, ಬೆಂಗಳೂರು-560025, ಇವರಿಗೆ ಸಲ್ಲಿಸುವಂತೆ ಮಡಿಕೇರಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
























