ಮಡಿಕೇರಿ ಆ.16 : ಚುನಾವಣೆ ಸಂದರ್ಭ ರಾಜ್ಯದ ಜನತೆಗೆ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳು ಅನುಷ್ಠಾನಗೊಳ್ಳುತ್ತಿದ್ದು, ಸರ್ಕಾರ ನುಡಿದಂತೆ ನಡೆಯುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು ಪ್ರತೀ ಬೂತ್ ಮಟ್ಟದಲ್ಲಿ ಗ್ಯಾರಂಟಿಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕೆಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕರೆ ನೀಡಿದ್ದಾರೆ.
ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಡಾ.ಅಂಬೇಡ್ಕರ್ ಭವನದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕರು ಮಾತನಾಡಿದರು.
ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಗುರಿಯನ್ನು ನಾನು ಹೊಂದಿದ್ದೇನೆ, ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆಯಾದರು ನನ್ನ ಗಮನಕ್ಕೆ ತಂದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಡಾ.ಮಂತರ್ ಗೌಡ, ಅಧಿಕಾರಿಗಳು ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಜನಸೇವೆ ಮಾಡಬೇಕು ಎಂದರು.
ಕ್ಷೇತ್ರದ ಮತದಾರರು ಬದಲಾವಣೆಯನ್ನು ಬಯಸಿ ಕಾಂಗ್ರೆಸ್ ನತ್ತ ಒಲವು ತೋರುವ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಚುನಾವಣಾ ಸಂದರ್ಭ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸರ್ಕಾರ ನುಡಿದಂತೆ ನಡೆದಿದೆ ಎಂದು ಹೇಳಿದ ಅವರು, ಪ್ರತಿ ವಾರ್ಡ್ ಗಳಿಗೂ ಭೇಟಿ ನೀಡಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.
ಕಾಂಗ್ರೆಸ್ ಸರ್ಕಾರ ಜನಪರ ಆಡಳಿತದೊಂದಿಗೆ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ. ಮಡಿಕೇರಿ ನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಈಗಾಗಲೇ ಯೋಜನೆಯನ್ನು ರೂಪಿಸಿದ್ದು, ಬಡ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮನೆ ನಿರ್ಮಾಣ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕರ್ತರ ನಿರಂತರ ಶ್ರಮದಿಂದ ಇಂದು ಕೊಡಗಿನಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಇನ್ನು ಮುಂದೆ ಕಾರ್ಯಕರ್ತರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು, ಲೋಕಸಭಾ ಚುನಾವಣೆಯನ್ನು ಎದುರಿಸಲು ಸಿದ್ಧರಾಗಬೇಕು. ಭಿನ್ನಾಭಿಪ್ರಾಯಗಳನ್ನು ಬಿಟ್ಟು, ಮುಂದಿನ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ಶ್ರಮಿಸಬೇಕು ಎಂದು ಡಾ.ಮಂತರ್ ಗೌಡ ಸಲಹೆ ನೀಡಿದರು.
ಮಾಜಿ ಸಚಿವ ಎಂ.ಸಿ.ನಾಣಯ್ಯ ಮಾತನಾಡಿ, 20- 25 ವರ್ಷಗಳ ನಂತರ ಕಾಂಗ್ರೆಸ್ ಪಕ್ಷ ಕೊಡಗಿನಲ್ಲಿ ಜಯ ಸಾಧಿಸಿದೆ. ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರ ಶ್ರಮ ಇದರಲ್ಲಿ ಅಡಗಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಭರವಸೆಗಳು ಈಡೇರುತ್ತಿದೆ. ಮುಂದಿನ ದಿನಗಳಲ್ಲೂ ಜನರ ಬೇಕು ಬೇಡಿಕೆಗಳನ್ನು ಈಡೇರಿಸುವ ಕೆಲಸ ಆಗಬೇಕು. ಆ ಮೂಲಕ ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ತನ್ನ ವ್ಯಾಪ್ತಿಯನ್ನು ಬಲಪಡಿಸಿಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು.
ಕೆಪಿಸಿಸಿ ಮಾಧ್ಯಮ ಸಂವಹನ ವಕ್ತಾರ ಟಿ.ಪಿ.ರಮೇಶ್ ಮಾತನಾಡಿ, ಕ್ಷೇತ್ರದ ಮತದಾರರ ಆಶೀರ್ವಾದದಿಂದ ಬಹುಮತದೊಂದಿಗೆ ಡಾ.ಮಂತರ್ ಗೌಡ ಅವರು ಗೆಲುವು ಸಾಧಿಸಿದ್ದಾರೆ. ಜನರ ಪ್ರೀತಿ ವಿಶ್ವಾಸಕ್ಕಾಗಿ ನಾವೆಲ್ಲರೂ ಪ್ರಾಮಾಣಿಕ ಸೇವೆ ಮಾಡಬೇಕಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಪ್ರತಿ ಮನೆಗಳಿಗೂ ತಲುಪಿಸುವ ಮೂಲಕ ಜನಪರವಾಗಿ ನಡೆದುಕೊಳ್ಳಬೇಕು ಎಂದರು.
ಜಾತಿ, ಮತಗಳ ವ್ಯತ್ಯಾಸವನ್ನು ಬದಿಗಿಟ್ಟು ಕಾರ್ಯನಿರ್ವಹಿಸಬೇಕು, ಹಿರಿಯರಿಗೆ ಗೌರವ ನೀಡಬೇಕು, ಪಕ್ಷ ಮತ್ತು ಸರ್ಕಾರಕ್ಕೆ ಕೊಂಡಿಯಾಗಿ ಕಾರ್ಯಕರ್ತರು ಕೆಲಸ ಮಾಡಬೇಕು. ಜನರ ನಾಡಿಮಿಡಿತವÀನ್ನು ಅರಿತು ಕೆಲಸ ಮಾಡಬೇಕು. ಮುಂಬರುವ ಎಲ್ಲಾ ಚುನಾವಣೆಗಳನ್ನು ಗೆಲ್ಲುವ ಪಣತೊಡಬೇಕೆಂದು ಕರೆ ನೀಡಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಬಿಜೆಪಿ ಭದ್ರಕೋಟೆಯಾಗಿದ್ದ ಕೊಡಗಿನಲ್ಲಿ ಅನೇಕ ಸವಾಲುಗಳ ನಡುವೆ ಕಾಂಗ್ರೆಸ್ ಗೆಲುವು ಸಾಧಿಸಿದೆ. ಇಬ್ಬರು ಶಾಸಕರ ಪರಿಶ್ರಮದಿಂದ ಇಂದು ಜಿಲ್ಲೆಯಲ್ಲಿ ಕಾಂಗ್ರೆಸ್ ಗಟ್ಟಿಯಾಗುತ್ತಿದೆ. ಮುಂದಿನ ದಿನಗಳಲ್ಲಿ ಭಿನ್ನಭಿಪ್ರಾಯಗಳನ್ನು ಬದಿಗಿಟ್ಟು ಕಾಂಗ್ರೆಸ್ ಗೆಲುವಿಗೆ ಶ್ರಮವಹಿಸಬೇಕು, ಪಕ್ಷವನ್ನು ಸಂಘಟಿಸುವ ಕೆಲಸ ಆಗಬೇಕು ಎಂದರು.
ಕೊಡಗಿಗೆ ಸಂಸದ ಪ್ರತಾಪ್ ಸಿಂಹ ಅವರ ಕೊಡುಗೆ ಶೂನ್ಯ ಎಂದು ಟೀಕಿಸಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಮರು ಸ್ಥಾಪಿಸುವಂತಾಗಬೇಕು ಎಂದು ಹೇಳಿದರು.
ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್ ಮಾತನಾಡಿ, ಎಲ್ಲಿ ಸೋತಿದ್ದೇವೋ ಅಲ್ಲೇ ಗೆಲ್ಲಬೇಕು ಎಂಬ ಹಂಬಲದಿಂದ ಹಗಲಿರುಳು ಶ್ರಮ ವಹಿಸಿ, ನಿರಂತರ ಜನಸಾಮಾನ್ಯರೊಂದಿಗೆ ಇದ್ದು, ಇಂದು ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ ಎಂದರು.
ಕಾಂಗ್ರೆಸ್ ಪಕ್ಷವನ್ನು ಇನ್ನು ಮುಂದೆ ಯಾವುದೇ ಪಕ್ಷದಿಂದ ಸೊಲಿಸಲು ಸಾಧ್ಯವಿಲ್ಲ. ಜಿಲ್ಲೆಯ ಪ್ರಗತಿ, ಜನರ ಭಾವನೆ, ವಿಚಾರಗಳನ್ನು ಅರಿತು ಪ್ರತಿಯೊಬ್ಬರು ಕಾರ್ಯನಿರ್ವಹಿಸಬೇಕು. ಸಣ್ಣ ಭಿನ್ನಭಿಪ್ರಾಯಗಳಿಂದ ಪಕ್ಷದಿಂದ ಹೊರಹೊದವರನ್ನು ಮತ್ತೆ ಪಕ್ಷದೊಳಗೆ ಕರೆತರುವಂತಾಗಬೇಕು. ಮುಂದೆ ನಡೆಯುವ ಸ್ಥಳೀಯ ಸಂಸ್ಥೆ ಸೇರಿದಂತೆ ಎಲ್ಲಾ ಚುನಾವಣೆಗೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಆ ಮೂಲಕ ಶಾಸಕರಿಗೆ ಬೆಂಬಲ ನೀಡಬೇಕು ಎಂದು ಕರೆ ನೀಡಿದರು.
ಕೆಪಿಸಿಸಿ ಸದಸ್ಯ ಹೆಚ್.ಎಂ.ನಂದಕುಮಾರ್ ಮಾತನಾಡಿ, ಎರಡು ದಶಕಗಳ ನಂತರ ಕಾಂಗ್ರೆಸ್ ಕನಸು ನನಸಾಗಿದ್ದು, ಕಾರ್ಯಕರ್ತರ ಹೋರಾಟ ಅಭಿನಂದನಾರ್ಹ. ಅಭ್ಯರ್ಥಿಗಳು ಜನರೊಂದಿಗೆ ಉತ್ತಮ ಸಂಬಂಧ ಹೊಂದಿದ್ದರೆ ಮಾತ್ರ ಪಕ್ಷ ಗೆಲುವು ಸಾಧಿಸಲು ಸಾಧ್ಯ. ಕಾರ್ಯಕರ್ತರು ಕೂಡ ಮತದಾರರೊಂದಿಗೆ ಇರಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ನಗರಾಧ್ಯಕ್ಷ ಬಿ.ವೈ.ರಾಜೇಶ್, ಮಡಿಕೇರಿ ನಗರ ಕಾಂಗ್ರೆಸ್ ಕಾರ್ಯಕರ್ತರು ಚುನಾವಣೆಗೂ ಮುನ್ನ ಹೆಚ್ಚು ಶ್ರಮ ವಹಿಸಿದ್ದಾರೆ. ಪ್ರತಿ 29 ಬೂತ್‍ಗಳಿಗೂ ಭೇಟಿ ನೀಡಿ ಪಕ್ಷದ ಯೋಜನೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯ ಮಾಡಿದ್ದಾರೆ. ವಿವಿಧ ಸಲಹೆ ಸೂಚನೆಗಳ ಮೂಲಕ ಪಕ್ಷದ ಗೆಲುವಿಗೆ ಶ್ರಮಿಸಿದ್ದಾರೆ. ಎಲ್ಲಾ ಸಂದರ್ಭದಲ್ಲೂ ಪಕ್ಷದ ಸಂಘಟನೆ ಕ್ಷೀಣವಾಗದಂತೆ ನೋಡಿಕೊಂಡ ಫಲವಾಗಿ ಭರ್ಜರಿ ಗೆಲುವು ಸಾಧ್ಯವಾಯಿತು ಎಂದರು.
ಶಾಸಕರು ಮಡಿಕೇರಿ ನಗರದ ಅಭಿವೃದ್ಧಿಗೆ ಆದ್ಯತೆ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಸ್.ಸಿ ಘಟಕದ ಜಿಲ್ಲಾಧ್ಯಕ್ಷ ಜಯೇಂದ್ರ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ ಹಾಗೂ ಕಾಂಗ್ರೆಸ್ ಜಿಲ್ಲಾ ಗೌರವ ಕಾರ್ಯದರ್ಶಿ, ಹಿರಿಯ ಮುಖಂಡ ವಿ.ಪಿ.ಸುರೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಮಡಿಕೇರಿ ನಗರ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ವಿವಿಧ ಘಟಕಗಳಿಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಲಾಯಿತು.
ಇದೇ ಸಂದರ್ಭ ನಿರಂಜನ್ ಹಾಗೂ ಸಂಗಡಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಮಡಿಕೇರಿ ಬ್ಲಾಕ್ ಅಧ್ಯಕ್ಷ ಹೆಚ್.ಎಂ.ಹಂಸ, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಸದಸ್ಯ ಅಬ್ದುಲ್ ಗಫೂರ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್, ಸೇವದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಕೆ.ಆರ್.ದಿನೇಶ್, ಮಾಜಿ ಸೈನಿಕ ಘಟಕದ ಜಿಲ್ಲಾಧ್ಯಕ್ಷ ಗಣೇಶ್, ಯೂತ್ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಪ್ರಮೋದ್, ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷ ಖಲೀಲ್ ಭಾಷ, ಹಿಂದುಳಿದ ಘಟಕದ ಬ್ಲಾಕ್ ಅಧ್ಯಕ್ಷ ಜಿ.ಸಿ.ಜಗದೀಶ್, ಎಸ್.ಸಿ.ಘಟಕದ ಬ್ಲಾಕ್ ಅಧ್ಯಕ್ಷ ಮುದ್ದುರಾಜ್, ಮಡಿಕೇರಿ ನಗರದ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ, ಯೂತ್ ಕಾಂಗ್ರೆಸ್ ನಗರಾಧ್ಯಕ್ಷ ದರ್ಶನ್ ಪೆಮ್ಮಯ್ಯ, ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್, ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರುಗಳಾ ಯಾಕುಬ್, ಪ್ರಕಾಶ್ ಆಚಾರ್ಯ, ಸದಾಮುದ್ದಪ್ಪ, ನಗರಸಭೆ ಮಾಜಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಪ್ರಮುಖರಾದ ಜುಲೆಕಾಬಿ, ಸ್ವರ್ಣಲತ, ಮಿನಾಜ್, ದಿವ್ಯ, ಪ್ರೇಮಲಿಂಗಪ್ಪ, ಪ್ರೇಮ ಕೃಷ್ಣಪ್ಪ, ಶಶಿ, ಕವನ್ ಕೊತ್ತೋಳಿ, ರಿಯಾಝುದ್ದೀನ್ ಸೇರಿದಂತೆ ಬೂತ್ ಅಧ್ಯಕ್ಷರು, ಮಡಿಕೇರಿ ನಗರದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಡಿಸಿಸಿ ಸದಸ್ಯ ಲಿಯಾಖತ್ ಆಲಿ ಪ್ರಾರ್ಥಿಸಿ, ಮಡಿಕೇರಿ ನಗರ ಪ್ರಧಾನ ಕಾರ್ಯದರ್ಶಿ ಆರ್.ಪಿಚಂದ್ರಶೇಖರ್ ಸ್ವಾಗತಿಸಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್ ನಿರೂಪಿಸಿ, ಡಿಸಿಸಿ ಮಾಜಿ ಸದಸ್ಯ ಟಿ.ಎಂ.ಅಯ್ಯಪ್ಪ ವಂದಿಸಿದರು.
Breaking News
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*
- *ವೀರ ಸೇನಾನಿಗಳಿಗೆ ಅಗೌರವ : ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆ ಖಂಡನೆ : ಆರೋಪಿಯ ಗಡಿಪಾರಿಗೆ ಆಗ್ರಹ*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶ*
- *ನ.29ರಂದು ಕೊಡಗು ಜಿಲ್ಲಾ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆಯ 12ನೇ ವಾರ್ಷಿಕ ಮಹಾಸಭೆ*