ಮಡಿಕೇರಿ ಆ.16 : ಮಡಿಕೇರಿ 66/11ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್12 ರಾಜಾಸೀಟ್ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಆಗಸ್ಟ್, 17 ರಂದು ಬೆಳಗ್ಗೆ 10 ರಿಂದ ಸಂಜೆ 4.30 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಗಾಂಧಿ ಮೈದಾನ, ಡಿ.ಸಿ ಆಫೀಸ್, ಇಂದಿರಾನಗರ, ರೇಸ್‌ಕೋರ್ಸ್ ರಸ್ತೆ, ಗಾಳಿಬೀಡು, ಹೊಸಬಡಾವಣೆ, ವಿದ್ಯಾನಗರ, ಎಫ್‍ಎಂಸಿ ಕಾಲೇಜು, ಐಟಿಐ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.







