ಮಡಿಕೇರಿ ಆ.16 : ‘ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ’ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2023 ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗಾಗಿ “ಹೊಯ್ಸಳ ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಪ್ರಕರಣವು 2022 ರ ಆಗಸ್ಟ್, 1 ರಿಂದ 2023 ರ ಜು.31 ರೊಳಗೆ ನಡೆದಿರಬೇಕು. 2005 ರ ಆಗಸ್ಟ್, 1 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10 ಸಾವಿರಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1 ಲಕ್ಷ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.
ಮಕ್ಕಳ ದಿನಾಚರಣೆ-2023 ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ (ದೂರವಾಣಿ:08272-298379) ಇವರಿಗೆ ಸೆಪ್ಟೆಂಬರ್, 15 ರೊಳಗೆ ಸಲ್ಲಿಸತಕ್ಕದ್ದು. ಅರ್ಜಿಯನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸಬೇಕು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ*
- *ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅಲುಫ್ ಎ.ಆರ್ ಚಾಂಪಿಯನ್*
- *ಮಡಿಕೇರಿಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ : ರಾಷ್ಟ್ರದ ಸದೃಢತೆಗೆ ಯುವಜನರು ಕೈಜೋಡಿಸಿ: ಸಿವಿಲ್ ನ್ಯಾಯಾಧೀಶೆ ಶುಭ*
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*