ಮಡಿಕೇರಿ ಆ.17 : ಕೊಡಗು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ನಿವಾಸದ ಮೇಲೆ ಲೋಕಾಯುಕ್ತ ದಾಳಿಯಾಗಿದೆ.
ಮುಂಜಾನೆ 4 ಗಂಟೆಗೆ ನಂಜುಂಡೆ ಗೌಡ ಅವರು ಮಡಿಕೇರಿ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ ಪಿ. ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿ ವೈ ಎಸ್ ಪಿ. ಪವನ್ ಕುಮಾರ್ , ಇನ್ಸ್ ಪೆಕ್ಟರ್ ಲೋಕೇಶ್ ಮತ್ತು ಸಿಬ್ಬಂದಿಗಳು ಪರಿಶೀಲನೆ ಕೈಗೊಂಡಿದ್ದಾರೆ. ಪಿರಿಯಾಪಟ್ಟಣದಲ್ಲಿ ಇರುವ ಮಾವನ ಮನೆ ಹಾಗೂ ಮೈಸೂರಿನಲ್ಲಿ ಇರುವ ಸಂಬಂಧಿಕರ ಮನೆ ಮೇಲೂ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ಮಾಡಿದ್ದು ಮಡಿಕೇರಿ ಮನೆಯಲ್ಲಿ ನಗದು ಪತ್ತೆಯಾಗಿದ್ದು, ತನಿಖೆ ಮುಂದುವರೆದಿದೆ.