ವಿರಾಜಪೇಟೆ ಆ.17 : ವಿರಾಜಪೇಟೆಯ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಅಧಿಕಾರಿಗಳಾದ ಮೀನ ಮುತ್ತಮ್ಮ ಧ್ವಜಾರೋಹಣ ನೆರವೇರಿಸಿದರು.
ನಂತರ ರಾಷ್ಟ್ರ ದ್ವಜಕ್ಕೆ ನಮಿಸಿ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.
ಆಸ್ಪತ್ರೆಯ ಶುಶ್ರೂಕಿಯರು ದೇಶ ಭಕ್ತಿಗೀತೆಯನ್ನು ಹಾಡಿದರು. ಈ ಸಂದರ್ಭದಲ್ಲಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಹೇಮಪ್ರಿಯ, ಇತರ ವೈದ್ಯಾಧಿಕಾರಿಗಳು, ಶುಶ್ರೂಕರು, ಕಚೇರಿ ಸಿಬ್ಬಂದಿಗಳು ಹಾಗೂ ಆಸ್ಪತ್ರೆಯ ನೌಕರರು, ಸಾರ್ವಜನಿಕರು ಹಾಜರಿದ್ದರು.








