ಮಡಿಕೇರಿ ಆ.17 : ಅಖಿಲ ಅಮ್ಮಕೊಡವ ವಿದ್ಯಾಭಿವೃದ್ಧಿ ಸಂಘದ ವತಿಯಿಂದ ಜನಾಂಗದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರತಿವರ್ಷದಂತೆ ಈ ಬಾರಿಯೂ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
7ನೇ ತರಗತಿ ಮೇಲ್ಪಟ್ಟ ಜನಾಂಗದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಮತ್ತು ವ್ಯಾಸಂಗ ಮಾಡುತ್ತಿರುವ ಬಗ್ಗೆ ಶಾಲೆಯಿಂದ ದೃಡೀಕರಣ ಪತ್ರ ಅಥವಾ ಶುಲ್ಕ ಪಾವತಿಯ ಪ್ರತಿಯೊಂದಿಗೆ ಅರ್ಜಿಯನ್ನು ಸೆ.15ರ ಒಳಗಾಗಿ ಆಯಾ ಗ್ರಾಮದಲ್ಲಿನ ಸಂಘದ ಪ್ರತಿನಿಧಿಗಳಿಗೆ ಅಥವಾ ಎನ್.ಕೆ.ಉಮೇಶ್ ಕೇಚಮಯ್ಯ, ಅಧ್ಯಕ್ಷರು, ಅ.ಅ.ಕೊ.ವಿ.ಸಂ. ಪೊನ್ನಂಪೇಟೆ, ಕುಟ್ಟಂದಿ ಗ್ರಾಮ ಮತ್ತು ಅಂಚೆ, 9480425773 ವಿಳಾಸಕ್ಕೆ ಸಲ್ಲಿಸುವಂತೆ ಸಂಘದ ಅಧ್ಯಕ್ಷ ಉಮೇಶ್ ಕೇಚಮಯ್ಯ ತಿಳಿಸಿದ್ದಾರೆ.







