ಮಡಿಕೇರಿ ಆ.17 : ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆಯ ಜಂಟಿ ಆಶ್ರಯದಲ್ಲಿ ಆ.20 ರಂದು ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸರ 108ನೇ ಜನ್ಮದಿನಾಚರಣೆ ನಡೆಯಲಿದೆ.
ಅಂದು ಅಪರಾಹ್ನ 2.30 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಾಜಿ ಸಚಿವ ಎಂ.ಸಿ.ನಾಣಯ್ಯ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ವಹಿಸಲಿದ್ದಾರೆ.
ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆಸಲ್ಲಿಸಿದ ಮಹಿಳೋದಯ ಮಹಿಳಾ ಒಕ್ಕೂಟದ ಸಂಯೋಕರಾದ ಜಾಯ್ಸ್ ಮೆನೇಜಸ್, ತಣಲ್ ವೃದ್ಧಾಶ್ರಮದ ಮೇಲ್ವಿಚಾರಕಿ ಬಿ.ಕೆ.ಶಶಿಕಲಾ, ಕೂರ್ಗ್ ಬ್ಲಡ್ ಪೌಂಡೇಷನ್‍ನ ಎಂ.ಸಮೀರ್, ಸಮಾಜ ಸೇವಕ ಬಾಬು ಚಂದ್ರ ಉಳ್ಳಾಗಡ್ಡಿ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸನ್ಮಾನಿಸಲಿದ್ದಾರೆ.
ಸಹಮತ ವೇದಿಕೆಯ ಅಧ್ಯಕ್ಷ ಟಿ.ಪಿ.ರಮೇಶ್, ಅಹಿಂದ ಒಕ್ಕೂಟದ ಅಧ್ಯಕ್ಷ ಟಿ.ಎಂ.ಮುದ್ದಯ್ಯ ಗೌರವ ಉಪಸ್ಥಿತರಿರಲಿದ್ದಾರೆ.









