ಮಡಿಕೇರಿ ಆ.17 : ಕುಶಾಲನಗರ ತಾಲ್ಲೂಕು ನಂಜರಾಯಪಟ್ಟಣ ವಿವಿದೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘ ವತಿಯಿಂದ ನಬಾರ್ಡ್ ಸಹಯೋಗದಲ್ಲಿ ನಿರ್ಮಿಸಲಾದ ನೂತನ ಬಹುಸೇವಾ ಕೇಂದ್ರದ ಗೋದಾಮು ಮಳಿಗೆಗಳು, ನೂತನ ಕಚೇರಿ, ಆಡಳಿತ ಸಭಾಂಗಣ ಮತ್ತು ನೂತನ ಸಹಕಾರ ಭವನದ ಉದ್ಘಾಟನಾ ಸಮಾರಂಭವು ಆ.20 ರಂದು ಬೆಳಗ್ಗೆ 11 ಗಂಟೆಗೆ ನಂಜರಾಯಪಟ್ಟಣದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಮಾಜಿ ಕ್ರೀಡಾ ಸಚಿವರಾದ ಎಂ.ಪಿ.ಅಪ್ಪಚ್ಚು ರಂಜನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷರಾದ ಕೊಡಂದೇರ ಪಿ.ಬಾಂಡ್ ಗಣಪತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಅಪ್ಪಚಟ್ಟೋಳಂಡ ಮನು ಮುತ್ತಪ್ಪ, ನಂಜರಾಯಪಟ್ಟಣ ಗ್ರಾ.ಪಂ.ಅಧ್ಯಕ್ಷರಾದ ಸಿ.ಎಲ್.ವಿಶ್ವ, ನಬಾರ್ಡ್ ಜಿಲ್ಲಾ ವ್ಯವಸ್ಥಾಪಕರಾದ ರಮೇಶ್ ಬಾಬು, ಕೊಡಗು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಆರ್.ಬಿ.ಸಚಿನ್, ಸಹಕಾರ ಸಂಘಗಳ ಉಪನಿಬಂಧಕರಾದ ಎಂ.ಎಸ್.ಕೃಷ್ಣ ಪ್ರಸಾದ್, ಸಹಕಾರ ಸಂಘಗಳ ಸಹಾಯಕ ನಿಬಂಧಕರು ಎಂ.ಈ.ಮೋಹನ್, ನಂಜರಾಯಪಟ್ಟಣ ವಿವಿದೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷರಾದ ಬಿ.ಸಿ.ಮಾದಯ್ಯ(ಮುರುಳಿ), ಇತರರು ಪಾಲ್ಗೊಳ್ಳಲಿದ್ದಾರೆ.