ಮಡಿಕೇರಿ ಆ.17 : ಆ.29 ರ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಗಸ್ಟ್, 28 ರಂದು ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ಆಗಸ್ಟ್, 28 ರಂದು ಬೆಳಗ್ಗೆ 7.15 ಗಂಟೆಗೆ ಗುಡ್ಡ ಗಾಡು ಓಟವನ್ನು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರವೇಶ ಶುಲ್ಕ ಇರುವುದಿಲ್ಲ. 14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರಿಗೆ 1 ಕಿ.ಮೀ. ಓಟ, ಮುಕ್ತ ಸ್ಪರ್ಧೆ(ಪುರುಷ ಮತ್ತು ಮಹಿಳೆಯರಿಗೆ) 5 ಕಿ.ಮೀ. ಓಟ. ನಂತರ 18 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರಿಗೆ ಡಬಲ್ಸ್ ಕ್ರೀಡೆ, ಮುಕ್ತ ಸ್ಪರ್ಧೆ(ಪುರುಷ ಮತ್ತು ಮಹಿಳೆಯರಿಗೆ) ಸಿಂಗಲ್ಸ್/ ಡಬಲ್ಸ್ ಕ್ರೀಡಾ ಸ್ಪರ್ಧೆ ನಡೆಯಲಿದೆ.
ಷಟಲ್ ಬ್ಯಾಡ್ಮಿಂಟನ್ ಆಟಗಾರರು ರಾಕೇಟ್‍ನ್ನು ತಾವೇ ತರಬೇಕು ಹಾಗೂ ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರವೇಶ ಶುಲ್ಕ ಇರುವುದಿಲ್ಲ. ಈ ಪಂದ್ಯಾವಳಿಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272-220986, ಗುಡ್ಡಗಾಡು ಓಟ 9480032712 ಮತ್ತು ಷಟಲ್ ಬ್ಯಾಡ್ಮಿಂಟನ್ ತರಬೇತುದಾರರು 9480443019 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*