ಮಡಿಕೇರಿ ಆ.18 : ಕೊಡಗು ಪತ್ರಕರ್ತರ ಸಂಘ ಹಾಗೂ ಕೊಡಗು ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಮಂಜಿನ ನಗರಿ ಛಾಯಾಗ್ರಾಹಕರ ಸಂಘದ ಆಶ್ರಯದಲ್ಲಿ ಆ.19 ರಂದು ಛಾಯಾಗ್ರಹಣ ದಿನವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ನಗರದ ಲಯನ್ಸ್ ಕ್ಲಬ್ ಹಾಲ್ ನಲ್ಲಿ ಬೆಳಿಗ್ಗೆ 10 ಗಂಟೆಗೆ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಉದ್ಘಾಟಿಸಲಿದ್ದು, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕೊಡಗು ಪತ್ರಕರ್ತರ ಸಂಘದ ಸಲಹೆಗಾರ ಬಿ.ಜಿ.ಅನಂತ ಶಯನ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎಸ್.ಆರ್. ವಸಂತ್, ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಸಮಿತಿ ಸದಸ್ಯ ದೀಪಕ್, ಮಂಜಿನ ನಗರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಪ್ರದೀಪ್ ಮರಗೋಡು, ಹಿಂದೂ ಮಲೆಯಾಳಿ ಸಮಾಜ ಜಿಲ್ಲಾಧ್ಯಕ್ಷ ವಿ.ಎಂ.ವಿಜಯ, ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಅಂಬೇಕಲ್ ನವೀನ್ ಕುಶಾಲಪ್ಪ ಅವರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸನ್ಮಾನ-ಪ್ರತಿಭಾ ಪುರಸ್ಕಾರ: ಸಮಾರಂಭದಲ್ಲಿ ಛಾಯಾಗ್ರಾಹಕರ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಗುತ್ತದೆ..ಇದೇ ವೇಳೆ ಮಾದ್ಯಮ ಅಕಾಡೆಮಿ ಪ್ರಶಸ್ತಿ ವಿಜೇತರು, ಹಿರಿಯ ಪತ್ರಕರ್ತರು, ಶಕ್ತಿ ಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ.ಅನಂತ ಶಯನ, ಪತ್ರಿಕಾ ಛಾಯಾಗ್ರಹಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸುತ್ತಿರುವ ವಿಶ್ವ ಕುಮಾರ್ ಗುಡ್ಡೇಮನೆ, ಪೊನ್ನಂಪೇಟೆ ಶೈಲೇಂದ್ರ ಮತ್ತು ಎಸ್.ಆರ್. ವಸಂತ್ ಅವರುಗಳನ್ಮು ಸನ್ಮಾನಿಸಿ ಗೌರವಿಸಲಾಗುತ್ತದೆ..
ಬಹುಮಾನ ವಿತರಣೆ: ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಪತ್ರಕರ್ತರಿಗೆ ಹಮ್ಮಿಕೊಳ್ಳಲಾಗಿದ್ದ ಅತ್ಯುತ್ತಮ ಕೃಷಿ ಫೋಟೋಗ್ರಫಿ, ಜಲಪಾತ ವೈಭವ ಸಂಬಂಧಿತ ಅತ್ಯುತ್ತಮ ವಿಡಿಯೋ ಗ್ರಫಿ ಸ್ಪರ್ಧೆ ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಗುತ್ತದೆ..
ಇದೇ ಸಂದರ್ಭ ಸಂಘದ ಗೌರವ ಸಲಹೆಗಾರರಾದ ಬಿ.ಜಿ.ಅನಂತ ಶಯನ ಅವರು ತಮ್ಮ ಪುತ್ರಿ ಡಾ. ಅನುಶ್ರೀ ಅವರ ಹ್ಯಾಪಿ ಟೀತ್ ಕ್ಲಿನಿಕ್ ಹೆಸರಲ್ಲಿ ಸ್ಥಾಪಿಸಿರುವ ಮಾನವೀಯ ಮೌಲ್ಯಗಳ ಕುರಿತಾದ ಅತ್ಯುತ್ತಮ ಫೋಟೋ ಗ್ರಫಿ ಸ್ಪರ್ಧೆಯ ಬಹುಮಾನವನ್ನೂ ವಿಜೇತರಿಗೆ ವಿತರಿಸಲಾಗುತ್ತದೆ ಎಂದು ಸಂಘದ ಸಹ ಕಾರ್ಯದರ್ಶಿ ಪ್ರಸಾದ್ ಸಂಪಿಗೆಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.