ಮಡಿಕೇರಿ ಆ.18 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿಮಹೋತ್ಸವ ಅಂಗವಾಗಿ ಆ.19 ರಂದು ಮಡಿಕೇರಿಯ ಗಾಂಧಿ ಭವನದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ನಡೆಯಲಿದೆ ಎಂದು ಬೆಳ್ಳಿಮಹೋತ್ಸವ ಸಾಂಸ್ಕೃತಿಕ ಸಮಿತಿ ಸಂಚಾಲಕ ಐಮಂಡ ಗೋಪಾಲ್ ಸೋಮಯ್ಯ ಹಾಗೂ ಕಾರ್ಯಕ್ರಮ ಸಂಚಾಲಕ ಮಂದನೆರವಂಡ ಯುಗ ದೇವಯ್ಯ ತಿಳಿಸಿದ್ದಾರೆ.
ಬೆಳಗ್ಗೆ 9.30 ಗಂಟೆಗೆ ಆರಂಭವಾಗಲಿರುವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕನ್ನಡ ಚಿತ್ರಂಗದ ಖ್ಯಾತ ಸಿನಿಮಾಟೊಗ್ರಾಫರ್, ನಿರ್ದೇಶಕ, ನಿರ್ಮಾಪಕ ಮುಂಗಾರು ಮಳೆ ಕೃಷ್ಣ ಆಗಮಿಸಲಿದ್ದಾರೆ. ಇವರೊಂದಿಗೆ ಹಿರಿಯ ಸುದ್ದಿ ವಾಚಕ ಗೌರೀಶ್ ಅಕ್ಕಿ ಹಾಗೂ ಟಿವಿ9 ಹೀಗೂ ಉಂಟೆ ಖ್ಯಾತಿಯ ಛಾಯಾಗ್ರಾಹಕ ಗುರುಚರಣ್ ಸಿಂಗ್ ಕೂಡ ವಿಶೇಷ ಆಹ್ವಾನಿತರಾಗಿ ಆಗಮಿಸುತ್ತಿದ್ದಾರೆ.
ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ ಏರ್ಪಡಿಸಲಾಗಿದ್ದ ರೀಲ್ಸ್ ಸ್ಪರ್ಧೆ, ಪತ್ರಕರ್ತರಿಗೆ ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಯ ಪ್ರದರ್ಶನ ಮತ್ತು ತೀರ್ಪುಗಾರಿಕೆ ನಡೆಯಲಿದೆ. ಇದೇ ಸಂದರ್ಭ ಗೌರೀಶ್ ಅಕ್ಕಿ ಅವರಿಂದ ನವ ಮಾಧ್ಯಮಗಳಲ್ಲಿ ಛಾಯಾಗ್ರಾಕರ ಭವಿಷ್ಯ ಮತ್ತು ಸವಾಲುಗಳು ಹಾಗೂ ಬಲ್ಲಚಂಡ ಭಜನ್ ಬೋಪಣ್ಣ ಅವರಿಂದ ಆಧುನಿಕ ಜಗತ್ತಿನಲ್ಲಿ ರಿಲ್ಸ್ ಟ್ರೆಂಡ್-ಸಾಧಕ ಬಾಧಕಗಳು* ಎಂಬ ವಿಷಯದ ಮೇಲೆ ವಿಚಾರ ಸಂಕಿರಣ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಮಾಧಪುರಾಣ ಕಿರುಚಿತ್ರ ಪ್ರದರ್ಶನ
ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಫಿಲಂಸ್ ನಿರ್ಮಾಣದ ಕೊಡಗಿನ ಮಾಲೆರ ಪ್ರಮೋದ್ ಬೋಪಣ್ಣ ಅಭಿನಯದ ಮಾಧಪುರಾಣ ಕಿರು ಸಿನಿಮಾದ ಪ್ರದರ್ಶನ ಕೂಡ ಆಯೋಜಿಸಲಾಗಿದೆ.
ಸಮಾರಂಭದಲ್ಲಿ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಜಿ ರಾಜೇಂದ್ರ, ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಉಪಸ್ಥಿತರಿರಲಿದ್ದಾರೆ. ಸಾರ್ವಜನಿಕರಿಗೂ ಮುಕ್ತ ಪ್ರವೇಶವಿದೆ ಎಂದು ಆಯೋಜಕರು ತಿಳಿಸಿದ್ದಾರೆ.
Breaking News
- *ಜ.5 ರಂದು ಪತ್ರಕರ್ತರ ಕ್ರಿಕೆಟ್ ಕಲರವ : ಆಟಗಾರರ ಪಟ್ಟಿ ಬಿಡುಗಡೆ*
- *ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*
- *ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*
- *ಬಸವನಹಳ್ಳಿ ವಸತಿ ಶಾಲೆಯಲ್ಲಿ ನಾಟಕ ಶಿಬಿರ*
- *ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ*
- *ಚಿರತೆ ಸೆರೆಗೆ ಸೂಚನೆ*
- *ಕರಿಕೆ- ಭಾಗಮಂಡಲ ಹೆದ್ದಾರಿ ಕಾಮಗಾರಿಗೆ ಚಾಲನೆ : ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ಶಾಸಕ ಪೊನ್ನಣ್ಣ*
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*