ಮಡಿಕೇರಿ ಆ.18 : ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಈ ಮೊದಲು ಸರ್ಕಾರದಿಂದ 8ನೇ ತರಗತಿವರೆಗೆ ಜಾರಿಯಲ್ಲಿದ್ದ ಬಿಸಿಯೂಟ ಜೊತೆ ಮೊಟ್ಟೆ ಮತ್ತು ಬಾಳೆ ಹಣ್ಣನ್ನು9ಮತ್ತು10ನೇ ತರಗತಿ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಬಾಳೆಲೆ ಗ್ರಾ.ಪಂ ಅಧ್ಯಕ್ಷ ಮುಕ್ಕಾಟಿರ ಜಾನಕಿ ಕಾವೇರಪ್ಪ ಚಾಲನೆ ನೀಡಿ, ಆರೋಗ್ಯಕರ ಆಹಾರ ಸೇವನೆಯಿಂದ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸುತ್ತದೆಯೆಂದು ಅಭಿಪ್ರಾಯ ವ್ಯಕ್ತಪಡಿಸಿದರು.
ವಿಜಯಲಕ್ಷ್ಮಿ ವಿದ್ಯಾಸಂಸ್ಥೆಯ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ, ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಹಾಗೂ ಮತ್ತಿತರರು ಹಾಜರಿದ್ದರು.