ಸೋಮವಾರಪೇಟೆ ಆ.18 : ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಕೆ.ಜೆ.ತಮ್ಮಯ್ಯ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ವಿಮಲಾಕ್ಷಿ ಆಯ್ಕೆಯಾದರು.
ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿದ್ದ ಜೋಯಪ್ಪ 3 ಮತಗಳನ್ನು ಪಡೆದರೆ, ಕಾಂಗ್ರೆಸ್ ಬೆಂಬಲಿತ ತಮ್ಮಯ್ಯ 4 ಮತಗಳನ್ನು ಪಡೆದು ಜಯಗಳಿಸಿದರು. ಉಪಾಧ್ಯಕ್ಷರಿಗೆ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾಧಿಕಾರಿಯಾಗಿ ಬಿಸಿಎಂ ಇಲಾಖೆಯ ಸ್ವಾಮಿ ಕಾರ್ಯನಿರ್ವಹಿಸಿದರು. ಈ ಸಂದರ್ಭ ಗ್ರಾ.ಪಂ ಸದಸ್ಯರಾದ ಡಿ.ಇ.ರಮ್ಯ, ಡಿ.ಬಿ. ಶಿವಮ್ಮ, ಡಿ.ಆರ್. ಬಸವಕುಮಾರ್, ಕೆ.ಕೆ. ಸಾಕಮ್ಮ ಇದ್ದರು. ಕಾಂಗ್ರೆಸ್ ಪ್ರಮುಖರಾದ ಕೆ.ಎಂ.ಲೋಕೇಶ್, ಕೆ.ಎಸ್.ಹರೀಶ್ ಮತ್ತಿತರರು ಇದ್ದರು.








