ಮಡಿಕೇರಿ ಆ.19 : ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಯುವತಿಯೋರ್ವಳು ಮೃತಪಟ್ಟಿರುವ ಘಟನೆ ವಿರಾಜಪೇಟೆ – ಅಮ್ಮತ್ತಿ ರಸ್ತೆಯ ಸುಂಕದಕಟ್ಟೆ ಬಳಿ ನಡೆದಿದೆ. ಅಮ್ಮತ್ತಿ ಕೆನರಾ ಬ್ಯಾಂಕ್ ಉದ್ಯೋಗಿ, ಕೇರಳ ಮೂಲದ ತ್ರಿಶೂರ್ ಜಿಲ್ಲೆಯ ಅಮೃತ (24) ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಒಂದು ವರ್ಷದ ಹಿಂದೆ ಅಮ್ಮತ್ತಿಯ ಕೆನರಾ ಬ್ಯಾಂಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಮೃತ ವಿರಾಜಪೇಟೆ ನಗರದ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.










