ಮಡಿಕೇರಿ ಆ.19 : ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.51 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.76 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1640.34 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2665.73 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 26.95 ಮಿ.ಮೀ. ಕಳೆದ ವರ್ಷ ಇದೇ ದಿನ 8.05 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2417.09 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3800.11 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 14.20 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1190.27 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2036.86 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.38 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.23 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1313.66 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2160.23 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 18.40, ನಾಪೋಕ್ಲು 16.40, ಸಂಪಾಜೆ 41, ಭಾಗಮಂಡಲ 32, ವಿರಾಜಪೇಟೆ ಕಸಬಾ 39.60, ಹುದಿಕೇರಿ 18.20, ಶ್ರೀಮಂಗಲ 12.40, ಪೊನ್ನಂಪೇಟೆ 8, ಅಮ್ಮತ್ತಿ 7, ಸೋಮವಾರಪೇಟೆ ಕಸಬಾ 28.60, ಶನಿವಾರಸಂತೆ 5, ಶಾಂತಳ್ಳಿ 48, ಕೊಡ್ಲಿಪೇಟೆ 11.80, ಕುಶಾಲನಗರ 15.90, ಸುಂಟಿಕೊಪ್ಪ 13.10 ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2858.14 ಅಡಿಗಳು. ಕಳೆದ ವರ್ಷ ಇದೇ ದಿನ 2856.73 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 7.80 ಮಿ.ಮೀ., ಇಂದಿನ ನೀರಿನ ಒಳಹರಿವು 1277 ಕ್ಯುಸೆಕ್, ಕಳೆದ ವರ್ಷ ಇದೇ ದಿನ 2726 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 1200 ಕ್ಯುಸೆಕ್. ನಾಲೆಗೆ 593 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 900 ಕ್ಯುಸೆಕ್. ನಾಲೆಗೆ 458 ಕ್ಯುಸೆಕ್.