ಮಡಿಕೇರಿ ಆ.19 : ಕೊಡಗಿನಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಸುರಿಯಲಾರಂಭಿಸಿದೆ. ಆದರೆ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗುತ್ತಿದ್ದು, ಈ ಬಾರಿ ಶೇ.50 ರಷ್ಟು ಮಳೆಯ ಕೊರತೆ ಎದುರಾಗಿದೆ.
2018ರ ನಂತರ ಪ್ರತಿವರ್ಷ ಆಗಸ್ಟ್ ತಿಂಗಳಿನಲ್ಲಿ ಉತ್ತಮ ಮಳೆಯಾಗುತ್ತಿತ್ತು. ಆದರೆ ಪ್ರಸ್ತುತ ಬಿಸಿಲಿನಲ್ಲೇ 15 ದಿನ ಕಳೆದು ಹೋಗಿದ್ದು, ಇದೀಗ ಮತ್ತೆ ಮಳೆಯ ವಾತಾವರಣ ಕಂಡು ಬಂದಿದೆ. ಜುಲೈ ತಿಂಗಳಿನಲ್ಲಿ ಸುರಿದ ಮಳೆಗೆ ತುಂಬಿ ಹರಿದಿದ್ದ ನದಿ, ತೊರೆ, ಜಲಾಶಯಗಳು ಬಿಸಿಲಿನ ವಾತಾವರಣದಿಂದಾಗಿ ನೀರಿನ ಕೊರತೆಯನ್ನು ಎದುರಿಸುತ್ತಿವೆ.
ಬರದ ಛಾಯೆ ಕಂಡು ಬಂದ ಹಿನ್ನೆಲೆಯಲ್ಲಿ ಇತ್ತೀಚೆಗೆ ಅಖಿಲ ಕೊಡವ ಸಮಾಜ ಹಾಗೂ ಸಾರ್ವಜನಿಕ ಸಂಘ ಸಂಸ್ಥೆಗಳು ಕೊಡಗಿನ ಮಳೆ ದೈವ ಎಂದೇ ಕರೆಯಲ್ಪಡುವ ಶ್ರೀಪಾಡಿ ಇಗ್ಗುತ್ತಪ್ಪನಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದರು. ಶುಕ್ರವಾರ ರಾತ್ರಿಯಿಂದ ಮಳೆ ಸುರಿಯಲು ಆರಂಭಗೊಂಡಿದ್ದು, ಜಿಲ್ಲೆಯ ಜನ ಹಾಗೂ ಕೃಷಿಕ ವರ್ಗ ಕೊಂಚ ನೆಮ್ಮದಿಯಿಂದ ಇದ್ದಾರೆ.
ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಜಿಲ್ಲೆಯನ್ನು ಮಳೆಯ ಕೊರತೆ ಕಾಡುತ್ತಿದೆ. ಪ್ರಸ್ತುತ ಜನವರಿಯಿಂದ ಇಲ್ಲಿಯವರೆಗಿನ 1640.34 ಮಿ.ಮೀ ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 2665.73 ಮಿ.ಮೀ ಮಳೆಯಾಗಿತ್ತು.
ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.51 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.76 ಮಿ.ಮೀ. ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 26.95 ಮಿ.ಮೀ. ಕಳೆದ ವರ್ಷ ಇದೇ ದಿನ 8.05 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2417.09 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3800.11 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 14.20 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1190.27 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2036.86 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.38 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.23 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1313.66 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2160.23 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 18.40, ನಾಪೋಕ್ಲು 16.40, ಸಂಪಾಜೆ 41, ಭಾಗಮಂಡಲ 32, ವಿರಾಜಪೇಟೆ ಕಸಬಾ 39.60, ಹುದಿಕೇರಿ 18.20, ಶ್ರೀಮಂಗಲ 12.40, ಪೊನ್ನಂಪೇಟೆ 8, ಅಮ್ಮತ್ತಿ 7, ಸೋಮವಾರಪೇಟೆ ಕಸಬಾ 28.60, ಶನಿವಾರಸಂತೆ 5, ಶಾಂತಳ್ಳಿ 48, ಕೊಡ್ಲಿಪೇಟೆ 11.80, ಕುಶಾಲನಗರ 15.90, ಸುಂಟಿಕೊಪ್ಪ 13.10 ಮಿ.ಮೀ.ಮಳೆಯಾಗಿದೆ.
::: ಹಾರಂಗಿ ಜಲಾಶಯದ ನೀರಿನ ಮಟ್ಟ :::
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2858.14 ಅಡಿಗಳು. ಕಳೆದ ವರ್ಷ ಇದೇ ದಿನ 2856.73 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 7.80 ಮಿ.ಮೀ., ಇಂದಿನ ನೀರಿನ ಒಳಹರಿವು 1277 ಕ್ಯುಸೆಕ್, ಕಳೆದ ವರ್ಷ ಇದೇ ದಿನ 2726 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 1200 ಕ್ಯುಸೆಕ್. ನಾಲೆಗೆ 593 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 900 ಕ್ಯುಸೆಕ್. ನಾಲೆಗೆ 458 ಕ್ಯುಸೆಕ್.