ಸೋಮವಾರಪೇಟೆ ಆ.19 : ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಬಿಸಿಯೂಟ ಅಡುಗೆ ಮನೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಸಿ.ಇ.ಒ.ವರ್ಣಿತ್ ನೇಗಿ ಭೇಟಿ ನೀಡಿ ಪರಿಶೀಲಿಸಿದರು.
ಕಳಪೆ ಕಾಮಗಾರಿಯಿಂದ ಶಾಲಾ ಕಟ್ಟಡ ಸೋರುತ್ತಿರುವ ಬಗ್ಗೆ ಪ್ರಾಂಶುಪಾಲ ಬೆಳ್ಳಿಯಪ್ಪ ಅವರಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭ ಚೌಡ್ಲು ಗ್ರಾ.ಪಂ ಸದಸ್ಯ ಮಹೇಶ್ ತಿಮ್ಮಯ್ಯ, ಉದ್ಯಮಿ ಗಿರೀಶ್ ಮಲ್ಲಪ್ಪ ಮತ್ತು ಉಪನ್ಯಾಸಕರು, ಶಿಕ್ಷಕರು ಇದ್ದರು.







