ಮಡಿಕೇರಿ ಆ.20 : ನಗರದ ಗಾಂಧಿ ಭವನದಲ್ಲಿ ಭಾನುವಾರ ಜಿಲ್ಲಾಡಳಿತ ವತಿಯಿಂದ ‘ಸದ್ಭಾವನಾ ದಿನಾಚರಣೆ’ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಪ್ರತಿಜ್ಞಾ ವಿಧಿಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರು ಬೋಧಿಸಿದರು, ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇಧಭಾವವಿಲ್ಲದೇ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ಪ್ರತಿಜ್ಞೆ ಮಾಡುತ್ತೇನೆ. ಅಲ್ಲದೇ ವೈಯಕ್ತಿಕವಾಗಿ ಅಥವಾ ಸಾಮೂಹಿಕವಾಗಿ ಆಗಲಿ ಎಲ್ಲಾ ಬೇಧಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇವೆಂದು ಪ್ರತಿಜ್ಞೆ ಮಾಡುತ್ತೇವೆ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ, ತಹಶೀಲ್ದಾರ್ ಪ್ರವೀಣ್ ಕುಮಾರ್, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಬಾಲರಾಜ್ ರಂಗರಾವ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪುಟ್ಟರಾಜು, ಮದೆ ಮಹದೇಶ್ವರ ಪಿಯು ಕಾಲೇಜಿನ ಪ್ರಾಂಶುಪಾಲರಾದ ಸಿದ್ದರಾಜು ಬೆಳ್ಳಯ್ಯ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.









